Homeಕರ್ನಾಟಕನೀಟ್: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ನೀಟ್: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ನೀಟ್ ಪರೀಕ್ಷೆಯಲ್ಲಿ ಕೆಲವು ರ‍್ಯಾಂಕ್‌ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರು ಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ ಎನ್.ಟಿ.ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ” ಎಂದರು.

“ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ” ಎಂದರು.

ದ್ವೇಷದ ರಾಜಕಾರಣ ಬಿಜೆಪಿ ಕೆಲಸ

ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ” ಎಂದರು.

“ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ” ಎಂದು ಹೇಳಿದರು.

ಎಸ್.ಸಿ.ಎಸ್.ಟಿ ವಿದ್ಯಾರ್ಥಿವೇತಬದ ಸೀಲಿಂಗ್ ಬಗ್ಗೆ ಚರ್ಚೆ ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು” ಎಂದರು.

ಶೀರ್ಘದಲ್ಲಿ ಜಿ.ಪಂ/ ತಾ.ಪಂ ಚುನಾವಣೆ

ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ “ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ ಮಾಡುತ್ತೇವೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments