Homeದೇಶನೀಟ್‌ ವಿವಾದ | ಕೊನೆಗೂ ತುಟಿ ಬಿಚ್ಚಿದ ಪ್ರಧಾನಿ ಮೋದಿ, ಹೇಳಿದ್ದೇನು?

ನೀಟ್‌ ವಿವಾದ | ಕೊನೆಗೂ ತುಟಿ ಬಿಚ್ಚಿದ ಪ್ರಧಾನಿ ಮೋದಿ, ಹೇಳಿದ್ದೇನು?

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೊಡ್ಡದಾಗಿ, ಎಲ್ಲಡೇ ಕೇಂದ್ರದ ವಿರುದ್ಧ ಟೀಕೆಗಳು ಕೇಳುತ್ತಿದ್ದಂತೆ ಕೊನೆಗೂ ತುಟಿ ಬಿಚ್ಚಿರುವ ಪ್ರಧಾನಿ ನರೇಂದ್ರ ಮೋದಿ, ತಪ್ಪಿತಸ್ಥರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ವಿಶೇಷ ಫಾಸ್ಟ್‌-ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸುವುದಾಗಿ ಗುರುವಾರ ಘೋಷಿಸಿದ್ದಾರೆ.

ನಮ್ಮ ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವಂತೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ಈ ಸಂಬಂಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡಿದ್ದೇನೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments