ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿಗೆ) ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತನಾಡಿದ ಅವರು, “ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು.
ದಿಂಗಾಲೇಶ್ವರ ಸ್ವಾಮೀಗೆ ಮನವಿ
“ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿಗೆ ನಾನು ಈಗಾಗಲೇ ಮನವಿ ಮಾಡಿರುವೆ. ಮತ್ತೊಮ್ಮೆ ಮಾಧ್ಯಮಗಳ ಮೂಲಕ ಮನವಿ ಮಾಡುವೆ; ಇವತ್ತು ಕೊನೆ ದಿನ. ದಿಂಗಾಕೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆಯಲಿ. ಜಾತ್ಯತೀತವಾಗಿರುವ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲಿ. ಅವರು ಕೂಡ ಜಾತ್ಯತೀತ ಸ್ವಾಮೀಜಿ. ನಿರೀಕ್ಷೆಯಿದೆ. ಅವರು ಕಾಂಗ್ರೆಸ್‌ಅನ್ನು ಬೆಂಬಲಿಸುತ್ತಾರೆ” ಎಂದರು.