ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ನಿವಾಸಕ್ಕೆ ಮಂಗಳವಾರ ಸಚಿವ ಹೆಚ್ ಕೆ ಪಾಟೀಲ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಎಚ್ ಕೆ ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿದರು. ಆಗ ಸಿಎಂ ಸಿದ್ದರಾಮಯ್ಯ ಅವರು ನೇಹಾ ತಂದೆ ನಿರಂಜನ ಹಿರೇಮಠ ಜೊತೆ ಮಾತನಾಡಿ, “ನಾವು ನಿಮ್ಮ ಜೊತೆ ಇರುತ್ತೇವೆ, ಬರಲು ಆಗಲಿಲ್ಲ ವೆರಿ ಸಾರಿ” ಎಂದರು. ಪ್ರಕರಣವನ್ನು ಸಿಐಡಿಗೆ ನೀಡಿದ್ದಕ್ಕೆ ನಿಮಗೆ ಧನ್ಯವಾದ ಅಂತ ನಿರಂಜನ ಹಿರೇಮಠ ಸಿಎಂಗೆ ಹೇಳಿದರು.
ನಿರಂಜನ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್ ಕೆ ಪಾಟೀಲ್, “ಅನಿವಾರ್ಯ ಕಾರಣಗಳಿಂದ ಸಿಎಂ ಬರುವುದಕ್ಕೆ ಆಗಿಲ್ಲ. ನೇಹಾ ತಂದೆ ನಿರಂಜನ ಜತೆ ಸಿಎಂ ಮಾತಾಡಿ ಸಾಂತ್ವನ ಹೇಳಿದ್ದಾರೆ. ನಿರಂಜನ ಹಿರೇಮಠಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ” ಎಂದರು.
“ನೇಹಾ ಸಾವಿಗೆ ನ್ಯಾಯ ಸಿಗಲಿದೆ. ಪ್ರಕರಣದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುವಂತೆ ಹೈಕೋರ್ಟ್ಗೆ ಪತ್ರ ಬರೆಯುತ್ತೇವೆ. ತಪ್ಪಿಸ್ಥರಿಗೆ ಸೂಕ್ತ ಶಿಕ್ಷೆ ಆಗುತ್ತೆ” ಎಂದು ಭರವಸೆ ನೀಡಿದರು.