ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಮನವಿಯ ಮೇರೆಗೆ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ನೆಟೆರೋಗ ಸಂತ್ರಸ್ಥರಿಗೆ ಪಾವತಿಸಲು ಬಾಕಿ ಇದ್ದ ರೂ.74.67 ಕೋಟಿ ಹಣವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಚಿವ ಎನ್.ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ರಾಜ್ಯ ಸರ್ಕಾರ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿ ಬೆಳೆ ನೆಟೆ ರೋಗದಿಂದ ಹಾನಿಯಾದ ಬೆಳೆಯ ಪರಿಹಾರ ಪಾವತಿಗೆ ರೂ.233ಕೋಟಿ ಅನುದಾನ ಮೀಸಲಿರಿ ಆದೇಶ ಹೊರಡಿಸಿತ್ತು.
ಈಗಾಗಲೇ ಎರಡು ಕಂತುಗಳಲ್ಲಿ ಒಟ್ಟು ರೂ.148.33 ಕೋಟಿಗಳನ್ನು ಬಿಡುಗಡೆ ಮಾಡಲಾಗಿತ್ತು. ಸಂಕಷ್ಟದಲ್ಲಿರುವ ರೈತರ ನೆರವಾಗುವ ಸಲುವಾಗಿ ಬಾಕಿ ಹಣವನ್ನೂ ಬಿಡುಗಡೆ ಮಾಡುವಂತೆ ಕೃಷಿ ಸಚಿವರು ಕೋರಿದ ಹಿನ್ನಲೆಯಲ್ಲಿ ಅಂತಿಮ ಕಂತಿನ ಅನುದಾನ ರೂ.74.67 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ನಾಲ್ಕು ಜಿಲ್ಲೆಗಳ ಅರ್ಹ ರೈತರ ಖಾತೆಗೆ ಹಣ ವರ್ಗಾವಣೆ ಆಗಲಿದೆ.