Homeಕರ್ನಾಟಕದೊಡ್ಡ‌ಮಟ್ಟದ ಸಭೆ, ಸಮಾರಂಭಕ್ಕೆ ಹೊಸ ಎಸ್‌ಒಪಿ ನಿಯಮ: ಸಚಿವ ಪರಮೇಶ್ವರ್

ದೊಡ್ಡ‌ಮಟ್ಟದ ಸಭೆ, ಸಮಾರಂಭಕ್ಕೆ ಹೊಸ ಎಸ್‌ಒಪಿ ನಿಯಮ: ಸಚಿವ ಪರಮೇಶ್ವರ್

ದೊಡ್ಡ‌ಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿ ಆಗಿರಲಿಲ್ಲ. ಮೊದಲನೇಯದಾಗಿ ಸಾವನ್ನಪ್ಪಿರುವ ಆತ್ಮಕ್ಕೆ ಶಾಂತಿ ಕೊರುತ್ತೇನೆ. ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದರು.

“ಸಿಎಂ ಅ‌ವರು ನಿನ್ನೆ ಸಭೆ ನಡೆಸಿ, ಅನೇಕ ಮಾಹಿತಿ ಪಡೆದು ಮಾತನಾಡಿದ್ದಾರೆ. ಈ ಬಗ್ಗೆ ಮ್ಯಾಜೆಸ್ಟ್ರೆಟಿಯಲ್ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆದೇಶಿಸಲಾಗಿದೆ. ಅವರು ಯಾರೇ ಆಗಿರಲಿ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ವಿವರಣೆ ಮಾಡಲು ಹೋಗುವುದಿಲ್ಲ. ತನಿಖೆಯ ವರದಿ ಬರುವವರೆಗು ಹೇಳಲು ಸಾಧ್ಯವಿಲ್ಲ” ಎಂದರು

“ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಘಟನೆಗಳು ಆಗಬಾರದು ಎಂಬ ವಿಚಾರದಲ್ಲಿ ಗೃಹ ಇಲಾಖೆಯಿಂದ ಒಂದು ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡುತ್ತೇವೆ.‌ ಇನ್ನುಮುಂದೆ ಯಾವುದೇ ದೊಡ್ಡ ಸಮಾರಂಭ, ಸಭೆ, ವಿಜಯೋತ್ಸವ ನಡೆಯುವಾಗ ಪೊಲೀಸ್ ಇಲಾಖೆಯ ನಿರ್ದೇಶನ ಏನು ಬರುತ್ತದೆ, ಅದರ ಚೌಕಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕು” ಎಂದು ಹೇಳಿದರು.

“ಹೊಸ ಎಸ್‌ಒಪಿ ಮಾಡುತ್ತೇವೆ. ನಾವು ಕೆಲವು ಸೂಚನೆಗಳನ್ನು ಕೊಡುತ್ತೇವೆ. ಯಾವತ್ತು ಕೂಡ ಇಂತಹ ಘಟನೆಗಳಾಗಬಾರದು. ಅಮಾಯಕರ ಸಾವುಗಳು ಆಗಬಾರದು. ಇದೆಲ್ಲವನ್ನು ನೋಡಿದಾಗ ನೋವಾಗುತ್ತದೆ. ನಿನ್ನೆ ಶವಗಾರದಲ್ಲಿ ನೋಡಿದಾಗ ದುಃಖವಾಯಿತು. 20-25 ವರ್ಷ ವಯಸ್ಸಿನವರು ಸಂತೋಷದಿಂದ ಆಚರಣೆಗೆ ಬಂದಾಗ ಜೀವವನ್ನೇ‌ ಕಳೆದುಕೊಂಡಿದ್ದಾರೆ. ಇದೆಲ್ಲವನ್ನು ಯಾರು ಊಹೆ ಮಾಡಿರಲಿಲ್ಲ” ಎಂದರು.

ಚಿನ್ನಸ್ವಾಮಿ ಸ್ಟೇಡಿಯಂಗೆ ಪರಮೇಶ್ವರ್ ಭೇಟಿ,‌ ಪರಿಶೀಲನೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ‌ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ ಸ್ಥಳಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹಾಗೂ ಡಿಸಿಪಿಗಳಿಂದ ಮಾಹಿತಿ ಪಡೆದರು. ಬಳಿಕ ಕೆಎಸ್‌ಸಿಎ, ಆರ್‌ಸಿಬಿ ಹಾಗೂ ಬೆಂಗಳೂರು ನಗರ ಪೊಲೀಸರೊಂದಿಗೆ ಸುದೀರ್ಘ ಸಭೆ ನಡೆಸಿ, ಚರ್ಚಿಸಿದರು.

ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು,‌ ” ಸಿಎಂ ಅವರು ಮೆಜಿಸ್ಟ್ರಿಯಲ್ ವಿಚಾರಣೆಗೆ ಆದೇಶಿಸಿದ್ದು, ಅದರ ಪ್ರಕ್ರಿಯೆ ಆರಂಭವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವ ಸ್ಥಳದಲ್ಲಿ ಕಾಲ್ತುಳಿತ ಆಗಿದೆ. ಅದನ್ನು ಯಾವ ರೀತಿಯಾಗಿ ತಪ್ಪಿಸಬಹುದಾಗಿತ್ತು ಎಂಬುದನ್ನು ತಿಳಿದುಕೊಳ್ಳಲು ಖುದ್ದಾಗಿ ನಾನೇ ಬಂದು ಪರಿಶೀಲಿಸಿದ್ದೇನೆ” ಎಂದರು.

“ಗೇಟ್ ನಂಬರ್ 6, 7, 2 ಮತ್ತು 2ಎ, 17, 18, 21, 16 ಇಷ್ಟು ಗೇಟ್‌ಗಳಲ್ಲಿ ಕಾಲ್ತುಳಿತ ಆಗಿದೆ. ಘಟನೆ ನಡೆದ ಸ್ಥಳದಲ್ಲಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇಲ್ಲ. ಆಸ್ಪತ್ರೆಗೆ ಕರೆದೊಯ್ಯುವಾಗ, ಚಿಕಿತ್ಸೆ ವೇಳೆ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ ಯಾವ ಗೇಟ್‌ನಲ್ಲಿ ಎಷ್ಟು ಜನ ಸಾವನ್ನಪ್ಪಿದರು ಎಂಬ ಮಾಹಿತಿ ಇಲ್ಲ” ಎಂದು ತಿಳಿಸಿದರು.

“ವಿಧಾನಸೌಧದ ಮುಂದೆ ಒಂದು ಲಕ್ಷ ಜನ ಸೇರುತ್ತಾರೆ ಎಂದು ಅಂದಾಜಿಸಲಾಗಿತ್ತು. ಸ್ಟೇಡಿಯಂನಲ್ಲಿ 40 ಸಾವಿರ ಮತ್ತು ಸ್ಟೇಡಿಯಂ ಹೊರಗಡೆ 2.50 ಲಕ್ಷ ಜನ ಸೇರಿದ್ದರು ಎಂಬುದಾಗಿ ಅಂದಾಜಿಸಲಾಗಿದೆ. ಮೆಟ್ರೋ ಸಂಸ್ಥೆಯವರು ಹೇಳುವ ಪ್ರಕಾರ 8.7 ಲಕ್ಷ ಜನ ಪ್ರಯಾಣಿಸಿದ್ದಾರೆ. ಇಷ್ಟೊಂದು ಜನ ಒಂದೇ ಕಡೆ ಸೇರಿದ್ದರ ಉದಾಹರಣೆಗಳಿಲ್ಲ. ದುರ್ದೈವದಿಂದ ಈ ರೀತಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments