Homeಕರ್ನಾಟಕಮೀನುಗಾರಿಕೆ ವಿಶ್ವವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ನಿರ್ಧಾರ: ಸಿದ್ದರಾಮಯ್ಯ ಭರವಸೆ

ಮೀನುಗಾರಿಕೆ ವಿಶ್ವವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ನಿರ್ಧಾರ: ಸಿದ್ದರಾಮಯ್ಯ ಭರವಸೆ

ಮೀನುಗಾರಿಕೆ ವಿಶ್ವವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು. ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸದಾ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ” ಎಂದರು.

“ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ” ಎಂದು ವಿವರಿಸಿದರು.

“ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡುತ್ತದೆ” ಎಂದು ಭರವಸೆ ನೀಡಿದರು.

ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿಸಿಎಂ ಡಿ ಕೆ ಶಿವಕುಮಾರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments