ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯನ್ನಾಗಿ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಜಂಟಿಯಾಗಿ ಘೋಷಿಸಿದರು.
ಬಿ ಎಸ್ ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ನಾಯರು ಸೇರಿ ಸಮನಯ್ವ ಸಭೆ ನಡಸಿ ಅಭ್ಯರ್ಥಿ ಆಯ್ಕೆಯ ತೀರ್ಮಾನ ಕೈಗೊಂಡರು.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ನಡೆದ ಕೊನೆಗೂ ಅಭ್ಯರ್ಥಿ ಯಾರು ಎಂಬುದಕ್ಕೆ ಇಂದು ಉತ್ತರ ಸಿಕ್ಕಿದೆ.
ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿ, ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ತಂತ್ರಗಳೆಲ್ಲ ತಲೆಕೆಳಗಾಗಿವೆ ಎನ್ನಲಾಗಿದ್ದು, ಅನಿವಾರ್ಯವಾಗಿ ಚನ್ನಪಟ್ಟಣ ಪ್ರತಿಷ್ಠೆಯ ಕ್ಷೇತ್ರವಾಗಿರವುದರಿಂದ ನಿಖಿಲ್ ಅವರನ್ನೇ ಮತ್ತೆ ಅದೃಷ್ಟ ಪರೀಕ್ಷೆಗೆ ಕುಮಾರಸ್ವಾಮಿ ನಿಲ್ಲಿಸಿದ್ದಾರೆ ಎನ್ನಲಾಗಿದೆ.