Homeಕರ್ನಾಟಕಜಗದೀಶ್ ಶೆಟ್ಟರ್‌ಗೆ ಯಾವುದೇ ಅನ್ಯಾಯ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಗದೀಶ್ ಶೆಟ್ಟರ್‌ಗೆ ಯಾವುದೇ ಅನ್ಯಾಯ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದಲ್ಲಿ ಆಗಿಲ್ಲ. ಅವಮಾನವೂ ಆಗಿಲ್ಲ. ಬಿಜೆಪಿಯಿಂದ ಅವಮಾನಿತರಾಗಿ ಬಂದ ಶೆಟ್ಟರ್‌ ಅವರಿಗೆ ಕಾಂಗ್ರೆಸ್ ಘನತೆಯಿಂದ ನಡೆಸಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಗದೀಶ್ ಶೆಟ್ಟರ್ ಅವರು ಪುನಃ ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಗುರುವಾರ ವಿರಾಜಪೆಟೆಯಲ್ಲಿ ಮಾತನಾಡಿ, “ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಸೇರಿದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ” ಎಂದರು.

“ಅವರು ಪುನಃ ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಪುನಃ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು. ನಂತರ ನನಗೆ ಅವರು ಸಿಕ್ಕಿಲ್ಲ” ಎಂದರು.

ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ

“ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿರುವ ಬಗ್ಗೆ ಮಾತನಾಡಿ, ಅದನ್ನು ಇಂಡಿಯಾ ಒಕ್ಕೂಟದ ಎಲ್ಲ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ” ಎಂದರು.

ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್: ಗಂಭೀರ ಪರಿಶೀಲನೆ

ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ, “ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ” ಎಂದರು.

ಯತೀಂದ್ರ ಸ್ಪರ್ಧಿಸುವುದಿಲ್ಲ

“ಲೋಕಸಭಾ ಚುನಾವಣೆಯಲ್ಲಿ ಕೊಡಗಿನಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ” ಎಂದು ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments