Homeಕರ್ನಾಟಕಗಲಾಟೆ ಆತಂಕ; ಮುನ್ನೆಚ್ಚರಿಕೆ ಕ್ರಮವಾಗಿ ನಟ ದರ್ಶನ್ ಬೇರೆ ಜೈಲಿಗೆ ಸ್ಥಳಾಂತರ‌ ಸಾಧ್ಯತೆ

ಗಲಾಟೆ ಆತಂಕ; ಮುನ್ನೆಚ್ಚರಿಕೆ ಕ್ರಮವಾಗಿ ನಟ ದರ್ಶನ್ ಬೇರೆ ಜೈಲಿಗೆ ಸ್ಥಳಾಂತರ‌ ಸಾಧ್ಯತೆ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ದರ್ಶನ್‌ ಅವರನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದು, ಈ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ.

ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗುತ್ತದೆ.

ಬೇರೆ ಜೈಲಿಗೆ ವರ್ಗಾವಣೆ ಮಾಡಲು ಮನವಿ ಮಾಡಿರುವ ಕಾರಣಗಳೆಂದರೆ, ಜನಪ್ರಿಯ ನಟನಾಗಿರುವುದರಿಂದ ಹಲವರು ಪರಿಚಯವಿದ್ದು ಕೈದಿಗಳ ನಡುವೆ ಗಲಾಟೆಯಾಗುವ ಸಾಧ್ಯತೆ ಇದೆ. ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು.

ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಕಾಂಟ್ಯಾಕ್ಟ್ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ. ಜೊತೆಗೆ ದರ್ಶನ್‌ನನ್ನು ನೋಡಲು ಕೈದಿಗಳಿಂದ ಜೈಲಿನೊಳಗೆ ಹಾಗೂ ಅಭಿಮಾನಿಗಳಿಂದ ಜೈಲಿನ ಹೊರಗೆ ದೊಂಬಿ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಎಸ್‌ಪಿಪಿ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments