Homeಕರ್ನಾಟಕಬೇರೆ ಪಕ್ಷಕ್ಕೆ ಹೋಗುವ ದಡ್ಡರು ನಮ್ಮಲ್ಲಿ ಯಾರೂ ಇಲ್ಲ; ಏಕನಾಥ್ ಶಿಂಧೆಗೆ ಸಚಿವ ಎಂ ಬಿ...

ಬೇರೆ ಪಕ್ಷಕ್ಕೆ ಹೋಗುವ ದಡ್ಡರು ನಮ್ಮಲ್ಲಿ ಯಾರೂ ಇಲ್ಲ; ಏಕನಾಥ್ ಶಿಂಧೆಗೆ ಸಚಿವ ಎಂ ಬಿ ಪಾಟೀಲ್‌ ತಿರುಗೇಟು

ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ‌ ಕಿಡಿಕಾರಿದರು.

ಸೋಮವಾರ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂಧೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ” ಎಂದು ಭವಿಷ್ಯ ನುಡಿದರು.

“ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು” ವಿವರಿಸಿದರು.

“ಏಕನಾಥ್‌ ಶಿಂಧೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರಕಾರ ಬರಲಿದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments