HomeSportಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ನಾಲ್ಕು ವರ್ಷ ಅಮಾನತು

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ನಾಲ್ಕು ವರ್ಷ ಅಮಾನತು

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ಡೋಪಿಂಗ್ ವಿಚಾರವಾಗಿ ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ.

ಕಳೆದ ಮಾರ್ಚ್ 10ರಂದು ಹರಿಯಾಣದ ಸೋನೆಪತ್‌ನಲ್ಲಿ ನಡೆದ ಕುಸ್ತಿ ಆಯ್ಕೆ ಟ್ರಯಲ್ಸ್‌ನಲ್ಲಿ ನಿಷೇಧಿತ ಉದ್ದೀಪನ ಮದ್ದು ಪರೀಕ್ಷೆಗಾಗಿ ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದಕ್ಕಾಗಿ ಪೂನಿಯಾ ಅವರನ್ನು ಏಪ್ರಿಲ್ 23ರಂದು ‘ನಾಡಾ’ ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು. ಅದನ್ನು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಸಂಸ್ಥೆಯೂ ಅಂಗೀಕರಿಸಿತ್ತು.

ಅಮಾನತು ಕ್ರಮ ಪ್ರಶ್ನಿಸಿ ಪೂನಿಯಾ ನಾಡಾಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಕಳೆದ ಸೆಪ್ಟೆಂಬರ್ 20 ಹಾಗೂ ಅಕ್ಟೋಬರ್ 4 ರಂದು ಅಂತಿಮ ವಿಚಾರಣೆ ನಡೆಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ ಮಂಗಳವಾರ ಪೂನಿಯಾ ಅವರನ್ನು ನಾಲ್ಕು ವರ್ಷ ಕುಸ್ತಿಯಿಂದ ಅಮಾನತು ಮಾಡಿ ಕ್ರಮ ಕೈಗೊಂಡಿದೆ. ಈ ಆದೇಶದ ಪ್ರಕಾರ ಪೂನಿಯಾ ಅವರು ಇನ್ನು ನಾಲ್ಕು ವರ್ಷ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕುಸ್ತಿ ಆಡುವಂತಿಲ್ಲ. ಈ ಅನರ್ಹತೆ 2024 ಏಪ್ರಿಲ್ 23ರಿಂದಲೇ ಅನ್ವಯವಾಗುತ್ತದೆ ಎಂದು ನಾಡಾ ತಿಳಿಸಿದೆ.

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಅವರ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಕುಸ್ತಿಪಟುಗಳ ಅಸಮಾಧಾನದ ಕಟ್ಟೆ ಒಡೆದು, ಕುಸ್ತಿಪಟು ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಯವರಿಗೆ ಹಿಂದಿರುಗಿಸುತ್ತಿರುವುದಾಗಿ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಬರೆದುಕೊಂಡು ಸುದ್ದಿಯಾಗಿದ್ದರು.

ಬಜರಂಗ್ ಪೂನಿಯಾ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರಿ, ಸದ್ಯ ಆ ಪಕ್ಷದ ರೈತ ಘಟಕದ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಜರಂಗ್ ಪೂನಿಯಾ ಕಾಂಗ್ರೆಸ್‌ ಸೇರಿದ ಮೇಲೆ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಕಾಂಗ್ರೆಸ್‌ ತೊರೆಯುವಂತೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ಪೊಲೀಸ್‌ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments