Homeಕರ್ನಾಟಕಸಿಎಂ ಸೂಚನೆ ಮೇರೆಗೆ ವಯನಾಡಿನ ರಕ್ಷಣಾ ಕಾರ್ಯಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್

ಸಿಎಂ ಸೂಚನೆ ಮೇರೆಗೆ ವಯನಾಡಿನ ರಕ್ಷಣಾ ಕಾರ್ಯಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಎಲ್ಲ ರೀತಿಯ ಅಗತ್ಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆಯ ಬೆನ್ನಲ್ಲೇ ಬುಧವಾರ ಬೆಳಿಗ್ಗೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರೊಂದಿಗೆ ಮತ್ತು ಮುಖ್ಯಮಂತ್ರಿ ಕಚೇರಿ ಹಾಗೂ ರಕ್ಷಣಾ ನಿರತ ವಿವಿಧ ಹಂತಗಳ ಅಧಿಕಾರಿ ವರ್ಗ ಜೊತೆ ಸಚಿವರಾದ ಸಂತೋಷ್ ಲಾಡ್ ನಿರಂತರ ಸಂಪರ್ಕದಲ್ಲಿದ್ದಾರೆ.

“ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಇಂತಹ ಸಂಧರ್ಭದಲ್ಲಿ ಮಾನವೀಯ ಸಹಾಯ ಹಸ್ತ ಚಾಚುವುದರೊಂದಿಗೆ, ಮಾಹಾವಿಕೋಪಕ್ಕೆ ತುತ್ತಾಗಿರುವ ಜನತೆಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವೆ” ಎಂದು ಸುದ್ದಿಗಾರರಿಗೆ ಸಚಿವ ಲಾಡ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments