Homeಕರ್ನಾಟಕಒಂದು ಲಕ್ಷ ರೂ. ಹೊರೆ ಕಡಿಮೆ ಮಾಡಲು ಒಪ್ಪಿದ ಸಿದ್ದರಾಮಯ್ಯ: ಸಚಿವ ಜಮೀರ್‌ ಅಹಮ್ಮದ್

ಒಂದು ಲಕ್ಷ ರೂ. ಹೊರೆ ಕಡಿಮೆ ಮಾಡಲು ಒಪ್ಪಿದ ಸಿದ್ದರಾಮಯ್ಯ: ಸಚಿವ ಜಮೀರ್‌ ಅಹಮ್ಮದ್

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ತಿಳಿಸಿದ್ದಾರೆ.

ಗುರುವಾರ ಸಂಜೆ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಯವರನ್ನು ಮನವೊಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

“ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ” ಎಂದು ತಿಳಿಸಿದರು.

“ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಗೆ 2017 ಸೆಪ್ಟೆಂಬರ್ 23ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್ ಟಿ -ಎಸ್ ಸಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು” ಎಂದರು.

“ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್ ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು. ಇದೀಗ ಸರ್ಕಾರದ ಮಹತ್ವದ ತೀರ್ಮಾನ ದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, ಎಸ್ ಸಿ -ಎಸ್ ಟಿ ವರ್ಗ 6.70 ಲಕ್ಷರೂ.ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬ ಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಹಿಂದೆ ಕ್ರಮವಾಗಿ 8.50 ಲಕ್ಷ ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು. ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್ ಲೈನ್ ಅರ್ಜಿ ಗಳಿಗೆ ಅನ್ವಯ ಆಗದು” ಜಮೀರ್ ಸ್ಪಷ್ಟ ಪಡಿಸಿದ್ದಾರೆ.

ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎಸ್. ಟಿ. ಸೋಮಶೇಖರ್, ಎಸ್. ಆರ್. ವಿಶ್ವನಾಥ್, ಮಂಜುಳಾ ಲಿಂಬಾವಳಿ, ಎಂ. ಕೃಷ್ಣಪ್ಪ, ಮುನಿರಾಜು,ಶಿವಣ್ಣ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments