Homeಕರ್ನಾಟಕಕುತಂತ್ರ ವ್ಯಕ್ತಿಗಳಿಂದ ಯತ್ನಾಳ ಅವರಿಗೆ ವಿಪಕ್ಷ ನಾಯಕನ ಸ್ಥಾನ ಕೈತಪ್ಪಿದೆ: ಮೃತ್ಯುಂಜಯ ಸ್ವಾಮೀಜಿ ಆರೋಪ

ಕುತಂತ್ರ ವ್ಯಕ್ತಿಗಳಿಂದ ಯತ್ನಾಳ ಅವರಿಗೆ ವಿಪಕ್ಷ ನಾಯಕನ ಸ್ಥಾನ ಕೈತಪ್ಪಿದೆ: ಮೃತ್ಯುಂಜಯ ಸ್ವಾಮೀಜಿ ಆರೋಪ

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಸಹಕಾರ ತೋರಿದ ಮನಸ್ಸುಗಳ ಒಳಸಂಚು ಮತ್ತು ಕುತಂತ್ರದಿಂದ ಯತ್ನಾಳ ಅವರಿಗೆ ವಿಪಕ್ಷ ನಾಯಕನ ಸ್ಥಾನ ಕೈತಪ್ಪಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ವಿಜಯಪುರದಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಯತ್ನಾಳ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕು ಎಂದು ಸಮಾಜ ಕೇಳಿರಲಿಲ್ಲ. ಆದರೆ, ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ” ಎಂದು ಹೇಳಿದರು.

“ರಾಜ್ಯದ ಬಹುತೇಕ ಜನರು ಬಸನಗೌಡ ಪಾಟೀಲ ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು. ಬಿಜೆಪಿಯಲ್ಲಿ ಯತ್ನಾಳ ಅವರಷ್ಟು ಜನಪ್ರಿಯ ನಾಯಕ ಸದ್ಯ ಯಾರೂ ಇರಲಿಲ್ಲ. ನಮ್ಮ ಸಮಾಜದವರು ಸೇರಿದಂತೆ ಉತ್ತರ ಕರ್ನಾಟಕದವರು ಈ ಬಗ್ಗೆ ವಿರೋಧ ವ್ಯಕ್ತಪಡಿಸುತ್ತೇವೆ. ಯತ್ನಾಳ ಅವರಿಗೆ ಅನ್ಯಾಯ ಆಗಿರುವುದರಿಂದ ಸಮಾಜದಲ್ಲಿ ದೊಡ್ಡ ಅಸಮಾದಾನ ಉಂಟಾಗಿದೆ” ಎಂದು ಹೇಳಿದರು.

“ಉತ್ತರ ಕರ್ನಾಟಕ ಭಾಗದ ಲಿಂಗಾಯತ ನಾಯಕರನ್ನು ಅದರಲ್ಲೂ ವಿಶೇಷವಾಗಿ ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿ ಇದ್ದವನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಕಡೆಗಣಿಸುತ್ತಾ ಬಂದಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಒಳಗಾಗಿ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2 ‘ಎ’ ಮೀಸಲಾತಿ ಕಲ್ಪಿಸಬೇಕು. ಎಲ್ಲ ಲಿಂಗಾಯತರನ್ನು ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು. ಸರ್ಕಾರ ಯಾವುದೇ ಸ್ಪಂದನೆ ನೀಡದೇ ಇದ್ದರೇ ವಿಧಾನಸೌಧದ ಆವರಣದಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.

“ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟಗಾರರು, ನಾಯಕರ ಜೊತೆ ಮಾತುಕತೆ ನಡೆಸಿ, ಇರುವಂತ ಕಾನೂನು ಅಡೆತಡೆಯನ್ನು ನಿವಾರಿಸಿ, ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಈ ಕೆಲಸ ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನಕ್ಕೂ ಮೊದಲು ನಡೆಯಬೇಕು” ಎಂದು ಗಡುವು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments