Homeಕರ್ನಾಟಕಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಾಗಿದ್ದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ (88) ಗುರುವಾರ ನಿಧನರಾಗಿದ್ದಾರೆ.

ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದರು. ಅಂಕೋಲಾ ತಾಲೂಕಿನ ಬಡಿಗೆರಿ ಗ್ರಾಮದ ತಮ್ಮ ಮನೆಯಲ್ಲಿ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಅಲಿಯಾಸ್ ಸುಕ್ರಿ ಬೊಮ್ಮಗೌಡ ಅವರು ಹಾಲಕ್ಕಿ ಜಾನಾಂಗ ಜಾನಪದ ಕೋಗಿಲೆ ಎಂದೇ ಪ್ರಸಿದ್ದಿ ಪಡೆದಿದ್ದರು. ಹಾಲಕ್ಕಿ ಜಾನಪದ ಹಾಡುಗಳ ಜೊತೆ ಮದ್ಯ ನಿಷೇಧ ಹೋರಾಟ ಸೇರಿದಂತೆ ಹಲವು ಹೋರಾಟದಲ್ಲಿ ಭಾಗಿಯಾಗಿದ್ದರು. ಅಂಕೋಲದ ಬಡಿಗೇರಿ ಗ್ರಾಮವನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದರು.

ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನ ದಿಲ್ಲಿಗೆ ಕೊಂಡೊಯ್ದ ಕೀರ್ತಿ ಹೊಂದಿದ್ದಾರೆ. 2017ರಲ್ಲಿ ಇವರ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು. ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿಗೆ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ ಒಲಿದು ಬಂದಿವೆ.

ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿರ್ಧರಿಸಿದ್ದರು. ಹಾಗೂ ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಇದೀಗ ಹಾಲಕ್ಕಿ ಸಮುದಾಯ ತುಳಸಿ ಗೌಡ ಬೆನ್ನಲ್ಲೇ ಇದೀಗ ಸುಕ್ರಿ ಬೊಮ್ಮಗೌಡ ಅವರನ್ನೂ ಸಹ ಕಳೆದುಕೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments