Homeಕರ್ನಾಟಕಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ವಿಸ್ತರಣೆ: ಸಚಿವ ಪ್ರಿಯಾಂಕ್‌...

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ವಿಸ್ತರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ಒಂದು ವರ್ಷದ ಅವಧಿಗೆ ವಿಸ್ತರಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

“11 ರಿಂದ 40 ಹೆಕ್ಟೇರ್ ವರೆಗಿನ ಪಂಚಾಯತ್ ಕೆರೆಗಳಿಗೆ ಸಂಬಂಧಿಸಿದಂತೆ ಮೀನು ಪಾಶುವಾರು ಹಕ್ಕಿನ ಅವಧಿಯನ್ನು 2023-24ನೇ ಸಾಲಿಗೆ ನವೀಕರಿಸಿಕೊಂಡಿರುವ ಗುತ್ತಿಗೆದಾರರು ಹಾಗೂ ಟೆಂಡರುದಾರರುಗಳಿಗೆ ಪ್ರಕರಣಕ್ಕನುಗುಣವಾಗಿ ಒಂದು ವರ್ಷ ಅವಧಿಗೆ ಗುತ್ತಿಗೆಯನ್ನು ಪಾವತಿ ಸಹಿತ ವಿಸ್ತರಿಸುವ ಕುರಿತು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.

ಮೀನುಗಾರಿಕೆ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ಗುತ್ತಿಗೆ ಅವಧಿ ವಿಸ್ತರಿಸಿರುವಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆಅವರಿಗೆ ಪತ್ರ ಬರೆದು ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಮತ್ತೂ ಒಂದು ವರ್ಷ ಮುಂದುವರೆಸಲು ಕೋರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments