Homeಕರ್ನಾಟಕಬಿಜೆಪಿ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ಪಕ್ಷ ಸಿದ್ಧ: ಬಿ ವೈ ವಿಜಯೇಂದ್ರ

ಬಿಜೆಪಿ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ಪಕ್ಷ ಸಿದ್ಧ: ಬಿ ವೈ ವಿಜಯೇಂದ್ರ

ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ” ಎಂದು ತಿಳಿಸಿದ್ದಾರೆ.

“ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments