Homeಕರ್ನಾಟಕಸಿಎಂ ಅರ್ಜಿಗಳನ್ನು ವಿಚಾರಣೆಗೆತ್ತಿಗೊಳ್ಳದಂತೆ ಸೂಚಿಸಲು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

ಸಿಎಂ ಅರ್ಜಿಗಳನ್ನು ವಿಚಾರಣೆಗೆತ್ತಿಗೊಳ್ಳದಂತೆ ಸೂಚಿಸಲು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದರ ಪೈಕಿ ಒಬ್ಬರಾದ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ (ಆ. 19) ಬೆಳಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿರುವ ಕೃಷ್ಣ ಅವರು, ಸಿದ್ದರಾಮಯ್ಯನವರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ವಿಚಾರಣೆಗೆತ್ತಿಗೊಳ್ಳದಂತೆ ಕೆಳ ಹಂತದ ನ್ಯಾಯಾಲಯಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿ ಸಲ್ಲಿಸಿ ಮನವಿ ಮಾಡಿಕೊಂಡಿದ್ದಾರೆ.

ಅತ್ತ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸೋಮವಾರ ಬೆಳಿಗ್ಗೆ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರರಣೆ ಇಂದು ಮಧ್ಯಾಹ್ನ ನಡೆಯಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ಇಂದೇ (ಆ. 19) ಮಧ್ಯಾಹ್ನ 2.30ರ ಸುಮಾರಿಗೆ ವಿಚಾರಣೆಗೆ ಬರಲಿದೆ. ಈ ಎರಡು ವಿಚಾರಣೆಗಳ ತೀರ್ಪು ಏನು ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments