Homeಕರ್ನಾಟಕಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ: ಗೌರವ್ ಗುಪ್ತ

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ: ಗೌರವ್ ಗುಪ್ತ

– 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ

– ಎರಡನೇ ಹಂತದಲ್ಲಿ ಬಾಕಿ ಉಳಿದ ಹುದ್ದೆಗಳಿಗೆ ಸ್ಥಳ ನಿಯುಕ್ತಿ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದಲ್ಲಿ ಭರ್ತಿ ಮಾಡಲಾಗುತ್ತಿರುವ 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿ ಗುರುವಾರ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗಿದೆ.

ಗುರುವಾರ ನಡೆದ ಕೌನ್ಸೆಲಿಂಗ್ ನಲ್ಲಿ ಆಯ್ಕೆಯಾದ 20 ಸಹಾಯಕ ಇಂಜಿನಿಯರ್ (ಸಿವಿಲ್), 38 ಸಹಾಯಕ ಇಂಜಿನಿಯರ್ (ಇಲೆಕ್ಟ್ರಿಕಲ್), 20 ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್), 27 ಸಹಾಯಕ ಇಂಜಿನಿಯರ್ (ಇನ್ ಸ್ಟ್ರುಮೆಂಟೇಷನ್), 13 ಕಿರಿಯ ಎಂಜಿನಿಯರ್ (ಸಿವಿಲ್), 61 ಸಹಾಯಕ ಇಂಜಿನಿಯರ್ (ಇಲೆಕ್ಟ್ರಿಕಲ್), 41 ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್), 2 ಕೆಮಿಸ್ಟ್ ಹಾಗೂ 11 ಕೆಮಿಕಲ್ ಸೂಪರ್ ವೈಸರ್ ಹುದ್ದೆಗಳ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಮಾಡಲಾಗಿದೆ. ಉಳಿದ ಹುದ್ದೆಗಳಿಗೆ ದಾಖಲೆಗಳ ನೈಜತೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಬಳಿಕ ನೇಮಕಾತಿ ಆದೇಶ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.

ಕೌನ್ಸೆಲಿಂಗ್ ವೇಳೆ ನೂತನವಾಗಿ ನೇಮಕಗೊಂಡ ಅಭ್ಯರ್ಥಿಗಳನ್ನುದ್ದೇಶಿಸಿ ಮಾತನಾಡಿದ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳೂ ಆದ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತ ಅವರು, “ಮುಖ್ಯಮಂತ್ರಿಗಳು, ಇಂಧನ ಸಚಿವರ ಸಹಕಾರದಿಂದ ಕೆಪಿಸಿಎಲ್‌ನಲ್ಲಿಈ ನೇಮಕಾತಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗಿದೆ. ನಿಗಮಕ್ಕೆ ನೇಮಕಗೊಂಡಿರುವ ಯುವ ಇಂಜಿನಿಯರ್ ಗಳು ತಮ್ಮ ಕೌಶಲ್ಯದಿಂದ ಕೆಪಿಸಿಎಲ್‌ನ ಪ್ರತಿಷ್ಠೆ ಹೆಚ್ಚಿಸಬೇಕು. ನೀವು ಬಂದಿರುವುದರಿಂದ ನಿಗಮದಲ್ಲಿ ಉತ್ತಮ ಬದಲಾವಣೆಗಳಾಗಬೇಕು,” ಎಂದರು.

“ಕೇವಲ ವೇತನಕ್ಕಾಗಿ ಕೆಲಸ ಮಾಡಿದೆ, ವಿದ್ಯುತ್ ಉತ್ಪಾದನೆಯಲ್ಲಿ ನಿಗಮನನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯವ ಪ್ರಯತ್ನ ನಿಮ್ಮಿಂದ ಆಗಬೇಕು. ಹೊಸದಾಗಿ ನೇಮಕಗೊಂಡಿರುವವರಿಗೆ ಉನ್ನತ ಹುದ್ದೆಗೇರಲು ಸಾಕಷ್ಟು ಅವಕಾಶಗಳಿದ್ದು, ನಿಗಮದಿಂದ ನೀವೇನು ಪಡೆದಿದ್ದೀರಿ ಎಂಬುದಕ್ಕಿಂತ ನಿಗಮಕ್ಕೆ ನಿಮ್ಮ ಕೊಡುಗೆ ಮುಖ್ಯವಾಗುತ್ತದೆ ಎಂಬುದನ್ನು ತಿಳಿದು ಕೆಲಸ ಮಾಡಬೇಕು,” ಎಂದು ಸಲಹೆ ಮಾಡಿದರು.

ಕೆಪಿಸಿಎಲ್ ಹಣಕಾಸು ನಿರ್ದೇಶಕರಾದ ಆರ್. ನಾಗರಾಜ, ತಾಂತ್ರಿಕ ನಿರ್ದೇಶಕರಾದ ಎಂ.ಆರ್.ಗಂಗಾಧರ್, ಮಾನವ ಸಂಪನ್ಮೂಲ ನಿರ್ದೇಶಕರಾದ ರೇಖಾ ಟಿ., ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಡಾ. ಆಶಾ ಎಸ್. ಮತ್ತಿತರರು ಇದ್ದರು.

“ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಕೆಪಿಸಿಎಲ್‌ಅನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿರುವುದರಿಂದ ಅದರ ಭಾಗವಾಗಿ ಈ ನೇಮಕಾತಿಯನ್ನು ಮಾಡಲಾಗುತ್ತಿದೆ. ಈ ಮೂಲಕ ನಿಗಮವನ್ನು ಮತ್ತಷ್ಟು ಬಲಪಡಿಸಲು ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ ”
– ಕೆ.ಜೆ.ಜಾರ್ಜ್, ಇಂಧನ ಸಚಿವರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments