Homeದೇಶವಿಮಾನ ಅಪಘಾತ | ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ

ವಿಮಾನ ಅಪಘಾತ | ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ

ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲಾ ಪಂಚಾಯತ್‌ ಚುನಾವಣೆ ಹಿನ್ನೆಲೆ ಸಾರ್ವಜನಿಕ ಸಭೆ ನಡೆಸಲು ಅಜಿತ್‌ ಪವಾರ್‌ ಅವರು ಬಾರಾಮತಿಗೆ ಹೊರಟಿದ್ದರು. ಅವರೊಂದಿಗೆ ವಿಮಾನದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ವಿಎಸ್ಆರ್ ಏವಿಯೇಷನ್ ​​ನಿರ್ವಹಿಸುವ ವಿಟಿ-ಎಸ್‌ಎಸ್‌ಕೆ ಲಿಯರ್‌ಜೆಟ್ – 45 ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ ಐದು ಜನರಿದ್ದರು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸುದ್ದಿಯನ್ನು ಖಚಿತಪಡಿಸಿದೆ.

ಏರ್‌ಕ್ರಾಫ್ಟ್‌ ಲ್ಯಾಂಡಿಂಗ್‌ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ. ಇಂದು ಬೆಳಗ್ಗೆ 8.30ಕ್ಕೆ ದುರಂತ ಸಂಭವಿಸಿದೆ.

ಅಜಿತ್‌ ಪವಾರ್

ಲಿಯರ್‌ಜೆಟ್ 45 ವಿಮಾನ ಮುಂಬೈನಿಂದ ಹಾರಾಟ ಆರಂಭಿಸಿದ ಒಂದು ಗಂಟೆಯ ನಂತರ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಜಿಲ್ಲಾ ಪರಿಷತ್‌ಗಳು ಮತ್ತು ಪಂಚಾಯತ್ ಸಮಿತಿಗಳಿಗೆ ನಡೆಯುತ್ತಿರುವ ಚುನಾವಣೆಗಳ ಮಧ್ಯೆ, ಪವಾರ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದರು.

ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸತತವಾಗಿ ದೀರ್ಘಕಾಲ ಸೇವೆ ಸಲ್ಲಿಸಿದವರಲ್ಲಿ ಒಬ್ಬರಾಗಿದ್ದಾರೆ. ಮುಖ್ಯಮಂತ್ರಿಗಳಾದ ಪೃಥ್ವಿರಾಜ್ ಚವಾಣ್, ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.‌

ಅಜಿತ್‌ ಪವಾರ್

1991 ರಲ್ಲಿ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ನಂತರ ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಟ್ಟರು. ಅವರು ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾದರು. ಅವರು ಮೊದಲು 1991 ರ ಉಪಚುನಾವಣೆಯಲ್ಲಿ ಗೆದ್ದರು ಮತ್ತು ನಂತರ 1995, 1999, 2004, 2009 ಮತ್ತು 2014 ರಲ್ಲಿ ಗೆಲುವು ಸಾಧಿಸಿದರು.

ನವೆಂಬರ್ 2019 ರಲ್ಲಿ, ಅವರು NCP ಯಲ್ಲಿ ಒಡಕು ಮೂಡಿತು. ಹೀಗಾಗಿ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವನ್ನು ಸೇರಿಕೊಂಡು ಉಪಮುಖ್ಯಮಂತ್ರಿಯಾದರು. ಫೆಬ್ರವರಿ 2024 ರಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಿತು. ಅವರು ಸುನೇತ್ರಾ ಪವಾರ್ ಅವರನ್ನು ವಿವಾಹವಾದರು, ಅವರಿಗೆ ಜಯ್ ಮತ್ತು ಪಾರ್ಥ್ ಪವಾರ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments