Homeಕರ್ನಾಟಕಪ್ರಧಾನಿ ಮೋದಿ ವಿಶ್ವ ಗುರು ಅಲ್ಲ, ವಿಷ ಗುರು, ಸಾವಿರ ಸಲ ಹೇಳುವೆ: ಬಿ ಕೆ...

ಪ್ರಧಾನಿ ಮೋದಿ ವಿಶ್ವ ಗುರು ಅಲ್ಲ, ವಿಷ ಗುರು, ಸಾವಿರ ಸಲ ಹೇಳುವೆ: ಬಿ ಕೆ ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರು ಅಲ್ಲ, ವಿಷ ಗುರು ಎಂಬ ನನ್ನ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ನೂರಕ್ಕೆ ನೂರು ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು. ಪ್ರಧಾನಿ ಹೇಗೆ ವಿಷಗುರು ಎಂಬುದಕ್ಕೆ ನಾನಂತೂ ಸಾವಿರ ಸಮರ್ಥನೆ ಕೊಡಬಲ್ಲೆ. ಆದರೆ, ವಿಶ್ವ ಗುರು ಹೇಗೆ ಎಂಬ ಬಗ್ಗೆ ವಿವರಣೆ ಕೊಡಲು ಬಿಜೆಪಿ ನಾಯಕರಿಗೆ ಸಾಧ್ಯವೇ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಸವಾಲು ಹಾಕಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಬರೆದುಕೊಂಡಿರು ಅವರು, “ಆರ್ ಅಶೋಕ್ ಅವರು ಮೋದಿಯನ್ನು ವಿಶಕಂಠನಿಗೆ ಹೋಲಿಸಿದ್ದಾರೆ. ರಾಜಕೀಯ ಚರ್ಚೆಯನ್ನು ಹೇಗೆ ಮಾಡಬೇಕು ಎಂದು ಬಿಜೆಪಿಗರು ಕಲಿತುಕೊಳ್ಳಬೇಕು. ಚುನಾಯಿತ ಪ್ರತಿನಿಧಿಯಾಗಿರುವ ಪ್ರಧಾನಿಯನ್ನು ವ್ಯಕ್ತಿಪೂಜೆ ಅಥವಾ ಪೌರಾಣಿಕ ಹೋಲಿಕೆಗಳ ಮಟ್ಟಕ್ಕೆ ಇಳಿಯುವುದು ಅಸಹ್ಯಕರ” ಎಂದಿದ್ದಾರೆ.

“ಅಷ್ಟಕ್ಕೂ ವಿಶಕಂಠನೆಂದರೆ ಶಿವ. ಅರ್ಧಾಂಗಿ ಪರಿಕಲ್ಪನೆಯನ್ನೇ ಜಗತ್ತಿಗೆ ಸಾರಿದ ಶಿವನೆಲ್ಲಿ ? ತನ್ನ ಪತ್ನಿಯನ್ನೇ ಮನೆಗೆ ಸೇರಿಸದ ಮೋದಿಯೆಲ್ಲಿ ? ಇಂತಹ ವೈಯಕ್ತಿಕ ಚರ್ಚೆಗಳನ್ನು ಹುಟ್ಟುಹಾಕುವಂತಹ ಪರಿಸ್ಥಿತಿಯನ್ನು ಆರ್ ಅಶೋಕ್ ರಂತಹ ಬಿಜೆಪಿಯ ನಾಯಕರು ಸೃಷ್ಟಿಸುವುದು ದುರಂತ” ಎಂದು ಕುಟುಕಿದ್ದಾರೆ

“ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ವಿಶ್ವಗುರು’ ಎಂದು ಹೊಗಳುವ ರಾಜಕೀಯವನ್ನು ನಾನು ಎಂದಿಗೂ ಒಪ್ಪುವುದಿಲ್ಲ. ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಸಾಮಾಜಿಕ ವಿಭಜನೆ, ಇಡಿ, ಸಿಬಿಐ, ಐಟಿ ಸೇರಿದಂತೆ ಸಂಸ್ಥೆಗಳ ಸ್ವಾಯತ್ತತೆ ಕುಸಿತ, ಆರ್ಥಿಕತೆಯ ಅಧಃಪತನದ ಸಂದರ್ಭದಲ್ಲಿ ‘ವಿಶ್ವಗುರು’ ಎಂಬ ಪದ ಪ್ರಚಾರದ ಘೋಷಣೆಯಷ್ಟೇ ಹೊರತು ವಾಸ್ತವವಲ್ಲ” ಎಂದಿದ್ದಾರೆ.

“‘ವಿಶ್ವಗುರು’ ಎಂಬ ಪದವಿಗೆ ತಕ್ಕಂತೆ ದೇಶದ ಆರ್ಥಿಕತೆ, ಸಾಮಾಜಿಕ ಸೌಹಾರ್ದತೆ, ಸಂವಿಧಾನ ಮೌಲ್ಯಗಳು ಬಲವಾಗಿದೆಯೇ? ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಮಾನ್ಯತೆ ಹೆಚ್ಚಿದೆಯೇ? ಜನಜೀವನ ಸುಧಾರಿದೆಯೇ? ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಬೇಕು. ಆಡಳಿತದ ಫಲಿತಾಂಶಗಳಿಂದಲೇ ನಾಯಕತ್ವದ ಮೌಲ್ಯ ನಿರ್ಧಾರವಾಗಬೇಕೇ ಹೊರತು, ಬಾಲಂಗೋಚಿ ಹೊಗಳುಭಟ್ಟರಿಂದಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments