Homeದೇಶರಷ್ಯಾದಿಂದ ತೈಲ ಖರೀದಿಸುವುದಿಲ್ಲ ಪ್ರಧಾನಿ ಮೋದಿ ಹೇಳಿದ್ದಾರೆ: ಡೊನಾಲ್ಡ್ ಟ್ರಂಪ್

ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಪ್ರಧಾನಿ ಮೋದಿ ಹೇಳಿದ್ದಾರೆ: ಡೊನಾಲ್ಡ್ ಟ್ರಂಪ್

ರಷ್ಯಾದಿಂದ ತೈಲವನ್ನು ಇನ್ನು ಮುಂದೆ ಖರೀದಿಸುವುದಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ಅವರು ನನಗೆ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ರಷ್ಯಾದ ತೈಲ ಖರೀದಿಗೆ ಪ್ರತಿಯಾಗಿ ಭಾರತದ ವಸ್ತುಗಳ ಮೇಲೆ ದಂಡನಾತ್ಮಕ ಸುಂಕ ವಿಧಿಸಿದ ತಿಂಗಳುಗಳ ನಂತರ ಈ ಬೆಳವಣಿಗೆ ನಡೆದಿದೆ.

ಸುದ್ದಿಗಾರರ ಜೊತೆ ಮಾತನಾಡಿರುವ ಟ್ರಂಪ್‌, “ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ. ಸುಂಕ ಹೇರಿಕೆ ಪ್ರಕ್ರಿಯೆ ತಕ್ಷಣವೇ ನಿಲ್ಲಿಸಲು ಸಾಧ್ಯವಿಲ್ಲ, ಆದರೆ ಪ್ರಕ್ರಿಯೆ ಮುಂದುವರಿದಿದ್ದು ಸದ್ಯದಲ್ಲಿಯೇ ನಿಲ್ಲಲಿದೆ” ಎಂದು ತಿಳಿಸಿದ್ದಾರೆ.

ಟ್ರಂಪ್ ಅವರ ಹೇಳಿಕೆಯನ್ನು ಭಾರತ ತಕ್ಷಣವೇ ದೃಢಪಡಿಸಲಿಲ್ಲ. ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ಹೊರತಾಗಿಯೂ, ಭಾರತ ತನ್ನ ಐತಿಹಾಸಿಕ ಪಾಲುದಾರ ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿತ್ತು, ಪ್ರಧಾನಿ ಮೋದಿ ಈ ಹಿಂದೆ ಅದನ್ನು ಸಮರ್ಥಿಸಿಕೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments