Homeದೇಶ'ಪಿಎಂ ಸೂರ್ಯಘರ್' ₹16000 ಕೋಟಿ ಸಬ್ಸಿಡಿ ಸಕ್ರಿಯ: ಪ್ರಲ್ಹಾದ ಜೋಶಿ

‘ಪಿಎಂ ಸೂರ್ಯಘರ್’ ₹16000 ಕೋಟಿ ಸಬ್ಸಿಡಿ ಸಕ್ರಿಯ: ಪ್ರಲ್ಹಾದ ಜೋಶಿ

ಪಿಎಂ ಸೂರ್ಯಘರ್ ಯೋಜನೆಯಡಿ ಈವರೆಗೆ ₹ 16,000 ಕೋಟಿ ಸಬ್ಸಿಡಿ ಸಕ್ರಿಯಗೊಳಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಪಿಎಂ ಸೂರ್ಯಘರ್ ಮಫ್ತ್ ಬಿಜ್ಲಿ ಯೋಜನೆಯಲ್ಲಿ ಭಾರತ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಫೆಬ್ರವರಿ 2026ರವರೆಗೆ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಸೌರ ವಿದ್ಯುತ್ ಸಬಲೀಕರಣ ಕಲ್ಪಿಸಲಾಗಿದೆ ಎಂದಿದ್ದಾರೆ.

PM ಸೂರ್ಯಘರ್ ಯೋಜನೆಯಡಿ ಮೇಲ್ಛಾವಣಿ ಮೂಲಕ ಸೌರಶಕ್ತಿ ಶುದ್ಧ ಇಂಧನ ಹಾಗೂ ಕಡಿಮೆ ಬಿಲ್‌ ಮತ್ತು ಬಲವಾದ ಇಂಧನ ಸ್ವಾವಲಂಬನೆ ಸಾಧಿಸಲಾಗುತ್ತಿದೆ ಎಂದಿದ್ದಾರೆ.

ಸೌರ ಯೋಜನೆಗಳ ಮೂಲಕ ಭಾರತ ಇಂದು ಶುದ್ಧ ಇಂಧನ ದೇಶವಾಗಿ ಪರಿವರ್ತನೆಗೊಳ್ಳುತ್ತಿದೆ. ಪಿಎಂ ಸೂರ್ಯಘರ್ ಮತ್ತು ಪಿಎಂ ಕುಸುಮ್ ಯೋಜನೆ ಜನಸಾಮಾನ್ಯರು, ರೈತರನ್ನು ಸಬಲೀಕರಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಇಂಗಾಲದ ಹೊರಸೂಸುವಿಕೆ ಕಡಿಮೆ, ಇಂಧನ ದಕ್ಷತೆ ಸುಧಾರಣೆ ಮತ್ತು ವಿಕೇಂದ್ರೀಕೃತ ಸೌರ ವಿದ್ಯುತ್ ಉತ್ಪಾದನೆ ಮೂಲಕ ವಿದ್ಯುತ್ ವೆಚ್ಚ ಕಡಿಮೆ ಮಾಡುವುದರ ಮೇಲೆ ಕೇಂದ್ರೀಕರಿಸುತ್ತಿದೆ ಎಂದಿದ್ದಾರೆ ಸಚಿವ ಪ್ರಲ್ಹಾದ ಜೋಶಿ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments