ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿದ್ದಾರೆ.
ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ವಿಚಾರಣೆ ಎರಡನೇ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಎಡಿಜಿಪಿ ಬಿ ಕೆ ಸಿಂಗ್, ಡಿವೈಎಸ್‌ಪಿ ತನಿಖಾಧಿಕಾರಿ ಪೃಥ್ವಿಯವರಿಂದ ಯಡಿಯೂರಪ್ಪ ವಿಚಾರಣೆ ನಡೆದಿದೆ.
ಈಗಾಗಲೇ ಸಿಐಡಿ ಅಧಿಕಾರಿಗಳು ಧ್ವನಿ ಮಾದರಿಯನ್ನು ಸಂಗ್ರಹಿಸಿ ಕಳುಹಿಸಿದ್ದಾರೆ. ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಎರಡು ಬಾರಿ ನೋಟಿಸ್ ನೀಡಿದ್ದರು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ.
ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ ಬಿಎಸ್ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.
ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ವಿಚಾರರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿತ್ತು.