ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೊಕ್ಸೋ ಪ್ರಕರಣದಡಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ತನಿಖೆಗೆ ಹಾಜರಾಗುವಂತೆ ಬಿಎಸ್ವೈಗೆ ನೋಟಿಸ್ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಕಾಯ್ದೆ ಅಡಿಯ ಯಡಿಯೂರಪ್ಪ ವಿರುದ್ಧ ಬಾಲಕಿಯ ತಾಯಿ ದೂರು ಮಾಚ್ 14ರಂದು ದಾಖಲಿಸಿದ್ದರು.
ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿ, “ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ” ಎಂದು ಪೊಲೀಸರಿಗೆ ತಿಳಿಸಿದ್ದರು.
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಬಿಎಸ್ವೈ ಅರ್ಜಿ ಸಲ್ಲಿಸಿದ್ದಾರೆ.
“ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು” ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.