Homeಕರ್ನಾಟಕಪೋಕ್ಸೊ ಪ್ರಕರಣ | ಬಿಎಸ್‌ವೈ ಅವರನ್ನು ಬಂಧಿಸದಂತೆ ಕೋರ್ಟ್‌ ಆದೇಶ

ಪೋಕ್ಸೊ ಪ್ರಕರಣ | ಬಿಎಸ್‌ವೈ ಅವರನ್ನು ಬಂಧಿಸದಂತೆ ಕೋರ್ಟ್‌ ಆದೇಶ

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ತಿಳಿಸಿದೆ.

ಈ ಮೂಲಕ ಬಿಎಸ್‌ವೈ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಬಂಧನದಿಂದ ಬಿಗ್​ ರಿಲೀಫ್​ ಸಿಕ್ಕಿದೆ.

ಪೋಕ್ಸೊ ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಕೃಷ್ಣ ಎಸ್​ ದೀಕ್ಷಿತ್​​​​​ರವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೇಳಿದೆ.

“ಸಿಆರ್​ಪಿಸಿ 41ಎ ಅಡಿ ಮಾ.28ರಂದು ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಏ.12ರಂದು ಬಿಎಸ್​ವೈ ವಿಚಾರಣೆಗೆ ಹಾಜರಾಗಿದ್ದರು. 2ನೇ ನೋಟಿಸ್​ಗೆ ಅವರು ಹಾಜರಾಗಿಲ್ಲ. ಜೂ.17ರಂದು ಹಾಜರಾಗುವುದಾಗಿ ಬಿಎಸ್​ವೈ ಉತ್ತರಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರ ಬಂಧನ ಅಗತ್ಯವಿಲ್ಲ” ಎಂದು ಕೋರ್ಟ್‌ ತಿಳಿಸಿದೆ.

ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ.

ಗುರುವಾರ ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಬಿಎಸ್‌ವೈಗೆ ಬಂಧನ ಭೀತಿ ಎದುರಾಗಿತ್ತು. ಈಗ ಹೈಕೋರ್ಟ್‌ ಆದೇಶದಿಂದ ಯಡಿಯೂರಪ್ಪ ನಿರಾಳರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments