Homeಕರ್ನಾಟಕಪೋಕ್ಸೊ ಪ್ರಕರಣ | ಅಗತ್ಯವಿದೆ ಎಂದರೆ ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಸಚಿವ ಪರಮೇಶ್ವರ್

ಪೋಕ್ಸೊ ಪ್ರಕರಣ | ಅಗತ್ಯವಿದೆ ಎಂದರೆ ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಸಚಿವ ಪರಮೇಶ್ವರ್

‌ಪೋಕ್ಸೊ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರನ್ನು ಬಂಧಿಸುವ ಅಗತ್ಯ ಇದೆ ಅಂತ ನಾನು ಹೇಳಲು ಆಗುವುದಿಲ್ಲ. ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಬಂಧಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ. ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ” ಎಂದರು.

“ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ತಮ್ಮನ್ನು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅದು ಅವರ ಕಾನೂನು ಹೋರಾಟ. ಅದಕ್ಕೆ ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ” ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ಪ್ರತಿಕ್ರಿಯಿಸಿ, “ಹೈದರಾಬಾದ್‌ನಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿದ್ದಾರೆ” ಎಂದು ಹೇಳಿದರು.‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments