Homeಕರ್ನಾಟಕಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜಕೀಯ ಷಡ್ಯಂತ್ರ: ಸಚಿವ ಎಂ‌ ಬಿ ಪಾಟೀಲ್‌

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜಕೀಯ ಷಡ್ಯಂತ್ರ: ಸಚಿವ ಎಂ‌ ಬಿ ಪಾಟೀಲ್‌

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಕಿಡಿಕಾರಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟೀಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ” ಎಂದರು.

“ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ‌ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು,‌ ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ” ಎಂದು ಅವರು ಆರೋಪಿಸಿದರು.

“ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ” ಎಂದು ಅವರು ಟೀಕಿಸಿದರು.

“ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments