Homeಕರ್ನಾಟಕಬೇಸಿಗೆಯಲ್ಲಿ ಅಂತರ್ಜಲ ಕುಸಿತ ಸಾಧ್ಯತೆ, ನೀರಿನ ದುರ್ಬಳಕೆ ತಡೆಗೆ ಜಲ ಮಂಡಳಿ ಕ್ರಮ

ಬೇಸಿಗೆಯಲ್ಲಿ ಅಂತರ್ಜಲ ಕುಸಿತ ಸಾಧ್ಯತೆ, ನೀರಿನ ದುರ್ಬಳಕೆ ತಡೆಗೆ ಜಲ ಮಂಡಳಿ ಕ್ರಮ

ರಾಜ್ಯದಲ್ಲಿ ಬೇಸಿಗೆ ಇನ್ನೂ ಆರಂಭವಾಗಿಲ್ಲ ಈಗಲೇ ಸುಡು ಬಿಸಿಲ ಧಗೆಗೆ ಜನ ಬಸವಳಿದು ಹೋಗುತ್ತಿದ್ದಾರೆ. ಅದರಲ್ಲಿ ಮಹಾನಗರ ಬೆಂಗಳೂರಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತಿದೆ.

ಇದರ ನಡುವೆ ನಗರದ ವಿವಿಧ ವಾರ್ಡ್‌ಗಳಲ್ಲಿ ಬೇಸಿಗೆಯಲ್ಲಿ ಅಂತರ್ಜಲ ಕುಸಿಯುವ ಸಾಧ್ಯತೆ ಇದ್ದು, ಇದರಿಂದ ನೀರಿನ ಅಭಾವ ಎದುರಾಗಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಬಳಕೆಯ ಮೇಲೆ ಮಿತಿ ಹೇರಬೇಕು. ಅಂತರ್ಜಲ ದುರ್ಬಳಕೆಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಜಲ ಮಂಡಳಿ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವ ಹಾಗೂ ಪೋಲು ಮಾಡುವುದನ್ನು ತಪ್ಪಿಸಲು ದಂಡನಾತ್ಮಕ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಜಲ ಮಂಡಳಿ ಹೊಸ ಆದೇಶವನ್ನು ಹೊರಡಿಸಿದ್ದು, ಕುಡಿಯುವ ನೀರನ್ನು ವಾಹನಗಳನ್ನು ತೊಳೆಯಲು ,ಕೈದೋಟಕ್ಕೆ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ನೆಲ ಸ್ವಚ್ಛತೆಗೆ ಬಳಸುವುದನ್ನು ನಿಷೇಧಿಸಿದೆ.

ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿ ಕುಡಿಯುವ ನೀರಿಗಲ್ಲದೇ, ಇತರೆ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಜಲಮಂಡಳಿ ಕಾಯ್ದೆಯ ಕಲಂ 109ರ ಅನ್ವಯ 500 ದಂಡ ವಿಧಿಸಲಾಗುವುದು. ಉಲ್ಲಂಘನೆ ಮರುಕಳಿಸಿದರೆ ದಂಡದ ಮೊತ್ತ 500 ಹಾಗೂ ಹೆಚ್ಚುವರಿಯಾಗಿ ಪ್ರತಿ ದಿನ 500 ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಜಲಮಂಡಳಿಯ ಸಹಾಯವಾಣಿ 1916ಕ್ಕೆ ದೂರು ನೀಡಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments