Homeಕರ್ನಾಟಕಪ್ರಜ್ವಲ್‌ ಪ್ರಕರಣ | ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಚಲುವರಾಯಸ್ವಾಮಿ

ಪ್ರಜ್ವಲ್‌ ಪ್ರಕರಣ | ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಚಲುವರಾಯಸ್ವಾಮಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಚಿವ ಎನ್‌ ಚಲುವರಾಯಸ್ವಾಮಿ ಪಾತ್ರ ಕೂಡ ಇದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಆರೋಪಕ್ಕೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, “ದೇಜರಾಜೇಗೌಡ ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವುದರಿಂದ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಈ ರೀತಿ ಕುತಂತ್ರದ ಆರೋಪ ಮಾಡಿದ್ದಾನೆ” ಎಂದಿದ್ದಾರೆ.

“ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿಕೆ ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ್‌ ಖರ್ಗೆ ಅವರ ಮೇಲೆ ಕೂಡ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ” ಎಂದು ಹೇಳಿದ್ದಾರೆ.

ದೇವರಾಜೇಗೌಡ ಆರೋಪ ಏನು?

ಹಾಸನದ ನ್ಯಾಯಾಲಯದ ಬಳಿ ಪೊಲೀಸ್‌ ವಾಹನದ ಒಳಗಿನಿಂದಲೇ ಶುಕ್ರವಾರ ಸರ್ಕಾರದ ಹಲವು ಪ್ರಮುಖ ಸಚಿವರ ಮೇಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಸ್ಫೋಟಕ ಆರೋಪವನ್ನು ಮಾಡಿದ್ದರು.

ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಹಂಚಿಕೆ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೆಸರು ಹೇಳುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಮ್ಮನ್ನು ಕರೆಸಿ 100 ಕೋಟಿ ರೂ. ಆಫರ್‌ ನೀಡಿದ್ದರು ಎಂದು ಆರೋಪಿಸಿದ್ದರು.

ಅದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ ಸಚಿವರಾದ ಎನ್‌ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ ಹಾಗೂ ಮತ್ತೊಬ್ಬ ಸಚಿವರು ಹಾಗೂ ಎಲ್‌ಆರ್‌ ಶಿವರಾಮೇಗೌಡ ಅವರ ಟೀಂ ಪೆನ್‌ಡ್ರೈವ್‌ ಪ್ರಕರಣದ ಹಿಂದೆ ಇದೆ ಎಂದು ಆರೋಪ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments