Homeಕರ್ನಾಟಕಪ್ರಜ್ವಲ್‌ ಪ್ರಕರಣ | ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ

ಪ್ರಜ್ವಲ್‌ ಪ್ರಕರಣ | ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಜ್ವಲ್ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸಾವಿರಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

2,144 ಪುಟಗಳ ದೋಷಾರೋಪ ಪಟ್ಟಿಯಲ್ಲಿ 123 ಸಾಕ್ಷ್ಯಗಳನ್ನು ಸಂಗ್ರಹ ಮಾಡಿ, ಜನಪ್ರತಿನಿಧಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ದೀರ್ಘ ವಿಚಾರಣೆಯ ನಂತರ ನ್ಯಾಯಾಲಯ ತೀರ್ಪು ಕೊಡಲಿದೆ.

ಪ್ರಮುಖವಾಗಿ ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ, ಹಣ್ಣುಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ದೌರ್ಜನ್ಯ ಮಾಡಿದ್ದಾರೆ. ಪುತ್ರ ಪ್ರಜ್ವಲ್‌ ಹೊಳೆನರಸೀಪುರ, ಬೆಂಗಳೂರಿನ ಬಸವನಗುಡಿ ಮನೆಗಳಲ್ಲಿ ಅತ್ಯಾಚಾರ ನಡೆಸಿದ್ದಾರೆ. ಹೊತ್ತಿಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಉಳಿದಂತೆ ಇನ್ನು ಎರಡು ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments