Homeಕರ್ನಾಟಕಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ, ಎಲ್ಲ ಮರೆತು ಮೋದಿ ಕೈ ಬಲಪಡಿಸೋಣ: ಹೆಚ್​ ಡಿ ದೇವೇಗೌಡ...

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ, ಎಲ್ಲ ಮರೆತು ಮೋದಿ ಕೈ ಬಲಪಡಿಸೋಣ: ಹೆಚ್​ ಡಿ ದೇವೇಗೌಡ ಕರೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಎದುರಿಸಿದ್ದೆವು. ಆದರೆ ಈಗ ಅದನ್ನೆಲ್ಲ ಮರೆಯಬೇಕು. ಈಗಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈಯನ್ನು ನಾವು ಬಲಪಡಿಸಲು ಹೋರಾಡಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ ಡಿ ದೇವೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ಮಾತನಾಡಿದ ಅವರು, “ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ” ಎಂದು ಘೋಷಣೆ ಮಾಡಿದರು.

“ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸೋಣ. ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ದೇಶದ ದೊಡ್ಡ ವ್ಯಕ್ತಿಯಾಗಿ ಬೆಳೆದಿರುವ ಮೋದಿ ಅವರೊಂದಿಗೆ ಜೆಡಿಎಸ್ ಸೇರಿದ್ದು, ಅಸೂಯೆ, ಟೀಕೆ ಮಾಡದೇ ಬಿಜೆಪಿ ಜೊತೆ ಸೇರಿ ಒಟ್ಟಾಗಿ ಕೆಲಸ ಮಾಡೋಣ. ಹಾಸನದ ಹಾಲಿ ಸಂಸದರನ್ನು ಗೆಲ್ಲಿಸಲು ಶ್ರಮಿಸೋಣ” ಎಂದರು.

“ಮುಂದಿನ ಲೋಕಸಭೆಯಲ್ಲಿ ನಮಗೆ ಎಷ್ಟು ಸೀಟು ಹಂಚಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಪ್ರಧಾನಿ, ಬಿಜೆಪಿ ಅಧ್ಯಕ್ಷಕರು, ಹೆಚ್​ ಡಿ ಕುಮಾರಸ್ವಾಮಿ ತೀರ್ಮಾನ ಮಾಡಲಿದ್ದಾರೆ” ಎಂದು ದೇವೇಗೌಡರು ಹೇಳಿದ್ದಾರೆ.

“ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್, ಒಂದೆರಡು ಕಡೆ ಬಿಜೆಪಿ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments