Homeಕರ್ನಾಟಕಪ್ರಜ್ವಲ್ ಲೈಂಗಿಕ ದೌರ್ಜನ್ಯ | ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ್‌

ಪ್ರಜ್ವಲ್ ಲೈಂಗಿಕ ದೌರ್ಜನ್ಯ | ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ್‌

ಸಂಸದ‌ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ‌, “ನಿನ್ನೆಯೊಬ್ಬರು ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಎಸ್ಐಟಿಯವರು ಒತ್ತಾಯಪೂರ್ವಕವಾಗಿ ಆಕೆಯಿಂದ ಸ್ಟೇಟ್ಮೆಂಟ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಯಾರಿಂದಲೂ ಬಾರದು. ಹೀಗಾಗಿ ಮ್ಯಾಜಿಸ್ಟ್ರೇಟ್ ಮುಂದೆಯೇ 164 ಅಡಿ ಹೇಳಿಕೆ ಕೊಡಿಸಲಾಗಿದೆ” ಎಂದರು.

“ಪ್ರಜ್ವಲ್ ರೇವಣ್ಣಗೆ 41A ಅಡಿಯಲ್ಲಿ ನೋಟಿಸ್ ಕೂಡಲಾಗಿದೆ. ಪ್ರಜ್ವಲ್ ಪರ ವಕೀಲ ಕಾಲಾವಕಾಶ ಕೇಳಿದ್ದಾರೆ. ಇದಕ್ಕೆ ಅವಕಾಶವಿಲ್ಲ ಎಂಬುದನ್ನು ತಿಳಿಸಿದ್ದೇವೆ. ರೇವಣ್ಣಗೂ ಕೂಡ 41A ಅಡಿ ನೀಟಿಸ್ ನೀಡಲಾಗಿದೆ. ರೇವಣ್ಣ ಸಹ 24 ಗಂಟೆ ಕಾಲಾವಕಾಶ ಕೇಳಿದ್ದಾರೆ. ಕಾನೂನು ಪ್ರಕಾರ ಮತ್ತೊಂದು ನೋಟಿಸ್ ನೀಡಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು‌.

“ಪ್ರಜ್ವಲ್ ರೇವಣ್ಣ ಕುರಿತು ಲುಕ್ ಔಟ್ ನೊಡೀಸ್ ಹೊರಡಿಸಲಾಗಿದೆ.‌ ಎಲ್ಲ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಗಳಿಗೆ ಫೋಟೋ ಸಮೇತ ನೋಟಿಸ್ ಕಳುಹಿಸಲಾಗಿದೆ‌‌.‌ ನಿಯಮಾನುಸಾರದ ಪ್ರಕಾರವೇ ಲುಕ್ ಔಟ್ ನೊಟೀಸ್ ನೀಡಿದ್ದೇವೆ. ರೇವಣ್ಣ ಅವರ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿರುವುದು ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ದುಬೈಗೆ ಹೋಗಿರುವುದು ಗೊತ್ತಿಲ್ಲ. ಜರ್ಮನಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ” ಎಂದರು.

ರಾಜಕೀಯ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ನನಗೆ ಒಂದಷ್ಟು ಜವಾಬ್ಧಾರಿಗಳಿವೆ. ಹಾಗಾಗಿ, ರಾಜಕೀಯ ಪ್ರತಿಕ್ರಿಯೆ ನೀಡುವುದಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅವರು ಯಾವ ಅಧಾರದ ಮೇಲೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ‌. ಇದಕ್ಕೆಲ್ಲ ಮುಖ್ಯಮಂತ್ರಿಯವರು, ಪಕ್ಷದ ಅಧ್ಯಕ್ಷರು ಉತ್ತರಿಸುತ್ತಾರೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments