Homeಕರ್ನಾಟಕಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನಕ್ಕೆ ಸಿಎಂ ಸೇರಿ ಗಣ್ಯರಿಂದ ಸಂತಾಪ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನಕ್ಕೆ ಸಿಎಂ ಸೇರಿ ಗಣ್ಯರಿಂದ ಸಂತಾಪ

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಗಂಭೀರ ಆರೋಪ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದು ರಾಜ್ಯದಾದ್ಯಂತ ದೊಡ್ಡ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ (84) ಗುರುವಾರ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು. ಇಂದು (ಸೆ.19) ಬೆಳಗ್ಗೆ 10 ಗಂಟೆಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ ತಾಣದಲ್ಲಿ ಸಂತಾಪ ಸೂಚಿಸಿದ್ದು, “ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು” ಎಂದು ತಿಳಿಸಿದ್ದಾರೆ.

“ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.

ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಸಂತಾಪ ಸೂಚಿಸಿ, “ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರ ನಿಧನದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಹೊರತಂದು ನಿರ್ಭೀತವಾಗಿ ಹೋರಾಡಿದ ಅವರ ನೇರ, ನಿಸ್ಪಕ್ಷಪಾತ ನಡೆ ಶ್ಲಾಘನೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಎಕ್ಸ್‌ ತಾಣದಲಿ ಪೋಸ್ಟ್‌ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments