Homeಕರ್ನಾಟಕಡಿ ಕೆ ಸುರೇಶ್ ಸ್ಪರ್ಧೆಗೆ ಒತ್ತಡ ಹೆಚ್ಚಿದೆ, ಯೋಗೇಶ್ವರ್ ಜೊತೆ ನಾನು ಮಾತನಾಡಿಲ್ಲ: ಡಿ ಕೆ...

ಡಿ ಕೆ ಸುರೇಶ್ ಸ್ಪರ್ಧೆಗೆ ಒತ್ತಡ ಹೆಚ್ಚಿದೆ, ಯೋಗೇಶ್ವರ್ ಜೊತೆ ನಾನು ಮಾತನಾಡಿಲ್ಲ: ಡಿ ಕೆ ಶಿವಕುಮಾರ್

ಸಿ ಪಿ ಯೋಗೇಶ್ವರ್ ಅವರನ್ನು ನಾನು ಭೇಟಿ ಮಾಡಿಲ್ಲ, ಮಾತೂ ಆಡಿಲ್ಲ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗೆ ನೀಡಬೇಕಾದ ಗೌರವ ಕೊಟ್ಟಿದ್ದೇನೆ. ಅದರ ಹೊರತಾಗಿ ನಮ್ಮ ಮಧ್ಯೆ ಯಾವುದೇ ಭೇಟಿ, ಚರ್ಚೆ ನಡೆದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಸೋಮವಾರ ಮಾಧ್ಯಮಗಳು ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಡಿ ಕೆ ಶಿವಕುಮಾರ್‌ ಉತ್ತರಿಸಿದರು.

“ಕುಮಾರಸ್ವಾಮಿ ಅವರಿಗೆ ಮಾಹಿತಿ ಇದ್ದರೆ ಮಾತನಾಡಿಕೊಳ್ಳಲಿ. ನನಗೂ ಬೇಕಾದಷ್ಟು ಮಾಹಿತಿಗಳಿವೆ. ಬೇರೆ ಪಕ್ಷದವರನ್ನು ಸಂಪರ್ಕಿಸುವ ಅವಶ್ಯಕತೆ ಸದ್ಯಕ್ಕಿಲ್ಲ ಎಂದು ನಾನು ನಮ್ಮ ಪಕ್ಷದವರಿಗೂ ಹೇಳಿದ್ದೇನೆ. ಯೋಗೇಶ್ವರ್ ಅವರು ಹಾಲಿ ವಿಧಾನ ಪರಿಷತ್ ಸದಸ್ಯರು. ಚನ್ನಪಟ್ಟಣದಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದ ನಾವು ಕೆಲಸ ಮಾಡಿಕೊಂಡು ಕಾರ್ಯಕರ್ತರನ್ನು ಸಜ್ಜುಮಾಡಿಕೊಂಡು ಬಂದಿದ್ದೇನೆ” ಎಂದು ತಿಳಿಸಿದರು.

ಟಿಕೆಟ್ ಸಿಗದಿದ್ದರೆ ಯೋಗೇಶ್ವರ್ ಅತಂತ್ರವಾಗುತ್ತಾರೆ ಎಂದು ಕೇಳಿದಾಗ, “ನಾನು ಅವರ ಪಕ್ಷ ಹಾಗೂ ಎನ್‌ಡಿಎ, ಕುಮಾರಸ್ವಾಮಿ, ಯೋಗೇಶ್ವರ್, ದಳದ ವಿಚಾರವಾಗಿ ಮಾತನಾಡುವುದಿಲ್ಲ. ಕಳೆದ ಐದು ವರ್ಷಗಳಿಂದ ಕುಮಾರಸ್ವಾಮಿ ಅವರು ಆಡಿರುವ ಮಾತುಗಳನ್ನು ನೋಡಿಕೊಂಡು ಬನ್ನಿ. ಅವರು ಎಂದಿಗೂ ತಮ್ಮ ಮಾತಿಗೆ ಬದ್ಧವಾಗಿ ನಿಂತಿಲ್ಲ. ಹೀಗಾಗಿ ಅವರ ನಿಲುವಿನ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

ಜೆಡಿಎಸ್ ದುರ್ಬಲ ಎಂದು ಭಾವಿಸಲು ನಾನು ಮೂರ್ಖನಲ್ಲ

ಜೆಡಿಎಸ್‌ಗೆ ಚನ್ನಪಟ್ಟಣದಲ್ಲಿ ಅಭ್ಯರ್ಥಿಯಿಲ್ಲವೇ ಎಂದು ಕೇಳಿದಾಗ, “ಜೆಡಿಎಸ್ ಪಕ್ಷ ದುರ್ಬಲ ಎಂದು ನಾನು ಭಾವಿಸಿದರೆ ನನ್ನಂತ ಮೂರ್ಖ ಇನ್ಯಾರು ಇಲ್ಲ. ಆದರೆ ಕುಮಾರಸ್ವಾಮಿ ಇಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಕೇಂದ್ರ ಸಚಿವರಾಗಿರುವ ಅವರು ಎಲ್ಲರ ಕೈಕಾಲು ಕಟ್ಟಿಕೊಂಡು ನಮ್ಮ ಚಿಹ್ನೆಯಿಂದ ಸ್ಪರ್ಧೆ ಮಾಡಿ ಎಂದು ಬಿಜೆಪಿಯವರಿಗೆ ಹೇಳುವಷ್ಟು ದುರ್ಬಲರಾಗಿದ್ದಾರೆ ಎಂದು ಭಾವಿಸಿರಲಿಲ್ಲ” ಎಂದು ಲೇವಡಿ ಮಾಡಿದರು.

ಚನ್ನಪಟ್ಟಣದಲ್ಲಿ ಡಿ.ಕೆ. ಸುರೇಶ್ ಅವರ ಸ್ಪರ್ಧೆಗೆ ಒತ್ತಡ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದಾಗ, “ಶೇ 80 ರಷ್ಟು ಕಾರ್ಯಕರ್ತರು ಸುರೇಶ್ ಅವರ ಸ್ಪರ್ಧೆಗೆ ಬೇಡಿಕೆ ಇಟ್ಟಿದ್ದಾರೆ. ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತಾರೆ ಅವರ ಪರವಾಗಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಸ್ಪಷ್ಟಪಡಿಸಿದ್ದೇನೆ. ಲೋಕಸಭೆ ಚುನಾವಣೆ ಸೋಲಿನ ಆಘಾತದಿಂದ ನಾವಿನ್ನೂ ಹೊರಗೆ ಬಂದಿಲ್ಲ. ಸುರೇಶ್ ಅಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ. ಕಡಿಮೆ ಅಂತರದಲ್ಲಿ ಸೋತಿದ್ದರೆ ಒಂದು ಪಕ್ಷ ಸುಧಾರಿಸಿಕೊಳ್ಳಬಹುದಿತ್ತು. ಹೀಗಾಗಿ ನಾವು ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ಮಾತ್ರಕ್ಕೆ ಜನರ ಸೇವೆಯನ್ನು ಬಿಡಲು ಆಗುವುದಿಲ್ಲ” ಎಂದು ತಿಳಿಸಿದರು.

ಚನ್ನಪಟ್ಟಣದ ಅಭ್ಯರ್ಥಿ ನಾನೇ ಎನ್ನುತ್ತೀರಿ, ನೀವು ನಿಲ್ಲದಿದ್ದರೆ ನಿಜವಾದ ಅಭ್ಯರ್ಥಿ ಯಾರು ಎಂದು ಕೇಳಿದಾಗ, “ಈಗಲೂ ನಾನೇ ಅಭ್ಯರ್ಥಿ, ಅಭ್ಯರ್ಥಿ ನಾನಲ್ಲ ಎಂದು ಹೇಳಿದವರಾರು?” ಎಂದರು.

ಸಿಬಿಐಗೆ ನನ್ನ ಮೇಲೆ ಬಹಳ ಪ್ರೀತಿ

ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಕೇಳಿದಾಗ, “ಅವರು ನನ್ನನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನನ್ನನ್ನು ಬಿಡುತ್ತಿಲ್ಲ. ಈ ನೆಲದ ಕಾನೂನು ತನ್ನದೇ ಕ್ರಮ ಕೈಗೊಳ್ಳಲಿದೆ. ಈಗಾಗಲೇ ರಾಜ್ಯ ಹೈಕೋರ್ಟ್ ಯತ್ನಾಳ್ ಹಾಗೂ ಸಿಬಿಐ ಅರ್ಜಿಯನ್ನು ವಜಾಗೊಳಿಸಿದೆ. ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಾನೂನು ಪ್ರಕ್ರಿಯೆ ನಡೆಯುತ್ತದೆ. ಅವರು ಏನಾದರೂ ಮಾಡಿಕೊಳ್ಳಲಿ. ನನ್ನ ವಿರುದ್ಧ ಈಗಾಗಲೇ ಸಿಬಿಐ ತನಿಖೆ ಮಾಡಿದೆ. ಈಗ ಲೋಕಾಯುಕ್ತ ಸಂಸ್ಥೆ ಕೂಡ ತನಿಖೆ ಮಾಡುತ್ತಿದೆ. ಇನ್ನು 7-8 ವರ್ಷ ಈ ಪ್ರಕ್ರಿಯೆ ನಡೆಯುತ್ತದೆ” ಎಂದು ತಿಳಿಸಿದರು.

ಮಳೆಹಾನಿ ಪ್ರದೇಶಗಳಿಗೆ ದೀರ್ಘಾವಧಿ ಪರಿಹಾರಕ್ಕೆ ಸಮಿತಿ ರಚನೆ

ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಆಗಿರುವ ತೊಂದರೆ ಬಗ್ಗೆ ಕೇಳಿದಾಗ, “ಅನೇಕರು ತಗ್ಗು ಪ್ರದೇಶಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದು, ಭಾರಿ ಪ್ರಮಾಣದ ಮಳೆ ಬಂದಾಗ ಮನೆಗಳಿಗೆ ನೀರುನುಗ್ಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಬೆಂಗಳೂರಿನಲ್ಲಿ ಹೆಚ್ಚಿನ ಮಳೆ ಬಂದಾಗ ಎಲ್ಲೆಲ್ಲಿ ನೀರು ನಿಲ್ಲುತ್ತದೆ, ಸಮಸ್ಯೆ ಉಂಟಾಗುತ್ತಿದೆ ಆ ಪ್ರದೇಶಗಳಲ್ಲಿ ದೀರ್ಘಾವಧಿಯ ಪರಿಹಾರ ಕಂಡುಕೊಳ್ಳಬೇಕಿದೆ. ಇದಕ್ಕಾಗಿ ನಾವು ಸಮಿತಿ ರಚನೆಗೆ ಮುಂದಾಗಿದ್ದೇವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments