Homeಕರ್ನಾಟಕಮಾರ್ಚ್‌ 16,18ರಂದು ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ

ಮಾರ್ಚ್‌ 16,18ರಂದು ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 16ರಂದು ಕಲಬುರಗಿಗೆ ಮತ್ತು ಮಾರ್ಚ್‌ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, “ಮೋದಿ ಅವರ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 16ರಂದು ಕಲಬುರಗಿ ಎನ್‍ವಿ ಆಟದ ಮೈದಾನದಲ್ಲಿ ಸಭೆ ನಡೆಯಲಿದೆ. ಮಾರ್ಚ್‌ 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದರು.

“ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಅನೇಕ ನಾಯಕರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ” ಎಂದು ಹೇಳಿದರು.

ಶೀಘ್ರವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

“ಚುನಾವಣೆ ಗೆಲುವಿಗೆ ಎಲ್ಲ ಪೂರ್ವಸಿದ್ಧತೆಗಳನ್ನು ಕರ್ನಾಟಕ ಬಿಜೆಪಿ ಮಾಡುತ್ತಿದೆ. ಇವತ್ತು ರಾತ್ರಿ ಅಥವಾ ನಾಳೆ ಕರ್ನಾಟಕದ ಮೊದಲ ಹಂತದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ” ಎಂದು ತಿಳಿಸಿದರು.

“ಲೋಕಸಭಾ ಚುನಾವಣೆ ದೃಷ್ಟಿಯಿಂದ 28 ಲೋಕಸಭಾ ಕ್ಷೇತ್ರಗಳನ್ನು 8 ಕ್ಲಸ್ಟರ್‌ಗಳನ್ನಾಗಿ ನಾವು ವಿಂಗಡಿಸಿದ್ದೇವೆ. ಸ್ಥಳೀಯ ರಾಜಕೀಯ ಮತ್ತು ಭೌಗೋಳಿಕ ಹಿನ್ನೆಲೆಯನ್ನು ಕಣ್ಮುಂದೆ ಇಟ್ಟುಕೊಂಡು ಆ 8 ಕ್ಲಸ್ಟರ್‌ಗಳಲ್ಲಿ ಬೇರೆ ಬೇರೆ ರೀತಿಯ ಕಾರ್ಯಕ್ರಮ ಮತ್ತು ತಂತ್ರಗಾರಿಕೆಗಳನ್ನು ಮಾಡಲಾಗುತ್ತಿದೆ” ಎಂದರು.

“ಆ 8 ಕ್ಲಸ್ಟರ್‌ಗಗೆ ರಾಷ್ಟ್ರೀಯ ನಾಯಕರ ಪ್ರವಾಸಗಳು ಮುಕ್ತಾಯವಾಗಿವೆ. ಮೈಸೂರಿಗೆ ಅಮಿತ್ ಶಾ, ಕಲಬುರ್ಗಿಗೆ ಶಿವರಾಜ್ ಸಿಂಗ್ ಚೌಹಾಣ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೆಳಗಾವಿಗೆ, ದೇವೇಂದ್ರ ಫಡ್ನವೀಸ್ ಅವರು ಮಂಗಳೂರಿಗೆ ಬಂದಿದ್ದರು. 8 ಕ್ಲಸ್ಟರ್‌ಗಳಲ್ಲೂ ಪ್ರವಾಸ ಮುಗಿದಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments