Homeಕರ್ನಾಟಕಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ. ಗೋವಿಂದ ರಾವ್ ನೇಮಕ, ಸರ್ಕಾರ ಆದೇಶ

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ. ಗೋವಿಂದ ರಾವ್ ನೇಮಕ, ಸರ್ಕಾರ ಆದೇಶ

ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು, “ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಡಾ. ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಸಿಎಂ ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments