Homeಕರ್ನಾಟಕ961 ಹುದ್ದೆಗಳ ನೇಮಕಾತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ

961 ಹುದ್ದೆಗಳ ನೇಮಕಾತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲು ಸಚಿವ ಎನ್.ಚಲುವರಾಯಸ್ವಾಮಿ ಮುಂದಾಗಿದ್ದಾರೆ.

ಮೊದಲ ಹಂತದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುದ್ದೆಗಳ ವಿವರ

ಕಲ್ಯಾಣ ಕರ್ನಾಟಕ ಭಾಗದಲ್ಲಿ 34 ಕೃಷಿ ಅಧಿಕಾರಿ, 223 ಸಹಾಯಕ ಕೃಷಿ ಅಧಿಕಾರಿ, 17 ದ್ವಿತೀಯ ದರ್ಜೆ ಸಹಾಯಕರು, 17 ಬೆರಳಚ್ಚುಗಾರರು ಹಾಗೂ ಉಳಿಕೆ ವೃಂದದಲ್ಲಿ 84 ಕೃಷಿ ಅಧಿಕಾರಿ, 586 ಸಹಾಯಕ ಕೃಷಿ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 961 ಹುದ್ದೆಗಳ ನೇಮಕಾತಿಗೆ ಕೃಷಿ ಇಲಾಖೆಯಿಂದ ಕರ್ನಾಟಕ ಲೋಕಾಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments