Homeಕರ್ನಾಟಕಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಹೆಚ್ಚಿಸಲು ಪ್ರಸ್ತಾವ

ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಹೆಚ್ಚಿಸಲು ಪ್ರಸ್ತಾವ

ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇಕಡ ಹತ್ತರಷ್ಟು ಹೆಚ್ಚಿಸಲು ಅಬಕಾರಿ ಇಲಾಖೆ ಮುಂದಾಗಿದೆ.

ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿದ್ದು, 650 ಮಿ.ಲೀ. ಅಳತೆಯ ಪ್ರತಿ ಬಾಟಲಿ ಬಿಯರ್‌ನ ದರದಲ್ಲಿ ₹ 8ರಿಂದ ₹ 10ರವರೆಗೆ ಹೆಚ್ಚಳವಾಗಲಿದೆ.

ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ.

ಇದಕ್ಕಾಗಿ ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು–2024ರ ಕರಡನ್ನು ಶನಿವಾರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. 2023ರ ಜುಲೈ ತಿಂಗಳಲ್ಲಿ ಭಾರತೀಯ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 20ರಷ್ಟು ಮತ್ತು ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10ರಷ್ಟು ಹೆಚ್ಚಳ ಮಾಡಲಾಗಿತ್ತು.

ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಅವಕಾಶ ಕಲ್ಪಿಸುವ ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಶನಿವಾರದಿಂದ ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.

ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments