Homeಕರ್ನಾಟಕಸಿ ಟಿ ರವಿ ಅಣಕು ಶವಯಾತ್ರೆ ನಡೆಸಿ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರಿಂದ ಪ್ರತಿಭಟನೆ

ಸಿ ಟಿ ರವಿ ಅಣಕು ಶವಯಾತ್ರೆ ನಡೆಸಿ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರಿಂದ ಪ್ರತಿಭಟನೆ

ಸಿ.ಟಿ.ರವಿ ಅವರನ್ನು ಪರಿಷತ್‌ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿ.ಟಿ.ರವಿ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿಗೆ ಸೀರೆ ಉಡಿಸಿ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಆಕ್ರೋಶ ಹೊರಹಾಕಿದರು.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಶನಿವಾರ ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡಿದರು.

ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಚೆನ್ನಮ್ಮ ವೃತ್ತದಲ್ಲಿ ಪ್ರತಿಕೃತಿ ಸುಟ್ಟು ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರ ಹಾಕಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿ.ಟಿ.ರವಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಈ ವೇಳೆ ಹೋರಾಟಗಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶೋಕ ಸೂಚಿಸುವ ಹಾಡುಗಳನ್ನು ಹಾಕಿ ‘ಸಿಟಿ ಸತ್ನಪ್ರೊ ಸತ್ತೋ’ ಎಂದು ಬೊಬ್ಬೆ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು, ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಸಿ.ಟಿ.ರವಿ ಲಕ್ಷ್ಮಿ ಹೆಬ್ಬಾಳ್ಕರ್‌ ಅಷ್ಟೇ ಅಲ್ಲ. ಇಡೀ ಸ್ತ್ರೀಕುಲಕ್ಕೆ ಅಪಮಾನ ಮಾಡಿದ್ದಾರೆ. ಸಿ.ಟಿ.ರವಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲೆಡೆಯಿಂದ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಸಹ ಬಹಳ ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಒಂದು ಕ್ಷಣವೂ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಯುವ ಹಕ್ಕು ಸಿ.ಟಿ.ರವಿಗೆ ಇಲ್ಲ. ಅಂತವರನ್ನು ಬಿಜೆಪಿ ತಕ್ಷಣ ಹೊರಹಾಕಬೇಕು. ‘ಮಾತೆತ್ತಿದರೆ ಭಾರತ್ ಮಾತಾಕಿ ಜೈ ಜೈ ಶ್ರೀರಾಮ್ ಎನ್ನುವ ಬಿಜೆಪಿ ಸ್ತ್ರೀಯರಿಗೆ ಹೆಜ್ಜೆ ಹೆಜ್ಜೆಗೂ ಅವಮಾನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments