Homeಕರ್ನಾಟಕಪಿಎಸ್‌ಐ 545 ಹುದ್ದೆಗಳ ನೇಮಕಾತಿ | ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ

ಪಿಎಸ್‌ಐ 545 ಹುದ್ದೆಗಳ ನೇಮಕಾತಿ | ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) 545 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ನೇಮಕಾತಿ ಸಂಬಂಧದ ಅಧಿಸೂಚನೆಯನ್ನು ರದ್ದುಪಡಿಸಿ, ನೂತನವಾಗಿ ಪರೀಕ್ಷೆ ನಡೆಸಲು ಆಗಿನ ಬಿಜೆಪಿ ಸರ್ಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್​ ಇದೀಗ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ​​ವಜಾಗೊಳಿಸಿದೆ. ಈ ಮೂಲಕ ನ್ಯಾಯಾದೀಶ ಪಿ.ಎಸ್.ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದು, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದಾರೆ.

545 ಪಿಎಸ್‌ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಮಾಡಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ.

ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಪರೀಕ್ಷೆಯಲ್ಲಿ ರಿಗ್ಲಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್​ರನ್ನು ಬಂಧಿಸಿದ್ದರು. ಇದೀಗ ಎಡಿಜಿಪಿ ಅಮೃತ ಪಾಲ್​ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments