ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರವು ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾರ್ಚ್ 16ರಂದು ಆದೇಶ ಹೊರಡಿಸಿತ್ತು. ಸರ್ಕಾರಿ ಆದೇಶ ಪ್ರಕಟಗೊಂಡ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಅವರು ಅಧಿಕಾರ ಸ್ವೀಕಾರ ಮಾಡಿರಲಿಲ್ಲ.
“ಎಲ್ಲ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಟಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ” ಎಂದು ಅಧಿಕಾರ ಸ್ವೀಕರಿಸದ ಬಳಿಕ ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.