Homeಕರ್ನಾಟಕವೈಟ್ನರ್ ಅಡಿಯ ಅಕ್ಷರಗಳಿಗೆ ಟಾರ್ಚ್ ಹಾಕಿದ್ದು ಮುಖ್ಯಮಂತ್ರಿಗೆ ಶೋಭೆಯಲ್ಲ: ಕುಮಾರಸ್ವಾಮಿ

ವೈಟ್ನರ್ ಅಡಿಯ ಅಕ್ಷರಗಳಿಗೆ ಟಾರ್ಚ್ ಹಾಕಿದ್ದು ಮುಖ್ಯಮಂತ್ರಿಗೆ ಶೋಭೆಯಲ್ಲ: ಕುಮಾರಸ್ವಾಮಿ

ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ‘ಶಿಶುಪಾಲನ ಹಾಗೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ’ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, “ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ” ಎಂದಿದ್ದಾರೆ.

“ಇದು ಮೂಲ ದಾಖಲೆ, ಮುಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮುಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ? ಅಥವಾ ಇನ್ನಾರಾದರೂ ಇದ್ದಾರಾ” ಎಂದು ಪ್ರಶ್ನಿಸಿದ್ದಾರೆ.

“ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ ಹೇಗೆ” ಎಂದು ಸಿಎಂ ಅವರ ಕಾಲೆಳೆದಿದ್ದಾರೆ.

“ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ ಶಿಶುಪಾಲನ ಹಾಗೆ. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ” ಎಂದು ಕುಟುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments