Homeಕರ್ನಾಟಕದಲಿತರ ಹಣವನ್ನೇ ಲೂಟಿ‌ ಮಾಡಿದ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ್‌ ಆರೋಪ

ದಲಿತರ ಹಣವನ್ನೇ ಲೂಟಿ‌ ಮಾಡಿದ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ್‌ ಆರೋಪ

ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಸರ್ಕಾರ ಲೂಟಿ‌ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಸಿಎಂ ಅವರು ತಾವು ಬಚಾವ್ ಆಗುವುದಕ್ಕೆ ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ” ಎಂದು ದೂರಿದರು.

“ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೋಡಬೇಕು. ಸದನದ ಒಳಗೂ ಹೋರಾಟ ‌ಮಾಡುತ್ತೇವೆ. ಮುಡಾ ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕು” ಎಂದು ಒತ್ತಾಯಿಸಿದರು.

ರಾಜೀನಾಮೆ ಕೊಡುವವರೆಗೂ ಹೋರಾಟ

ಮುಡಾ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣವನ್ನು ಕೂಡಲೇ ಸಿಬಿಐಗೆ ಕೊಡಬೇಕು. ಸಿಎಂ ಅವರು ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ನೈತಿಕತೆ ಕಳೆದುಕೊಂಡಿದ್ದಾರೆ. ನಾಗೇಂದ್ರ ಬಂಧನವಾಗಿದ್ದಾರೆ. ಶಾಸಕ ದದ್ದಲ್ ಕಾಣೆಯಾಗಿದ್ದಾರೆ. ಕಾಣೆಯಾದ ಶಾಸಕ ದದ್ದಲ್​ರನ್ನು ಸರ್ಕಾರ ಹುಡುಕಿಕೊಡಬೇಕು” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments