Homeಕರ್ನಾಟಕದೆಹಲಿ ಫಲಿತಾಂಶ‌ | ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪ: ಆರ್‌ ಅಶೋಕ್

ದೆಹಲಿ ಫಲಿತಾಂಶ‌ | ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪ: ಆರ್‌ ಅಶೋಕ್

ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಶನಿವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, “ದೆಹಲಿ ರಾಜ್ಯದಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರ ಮುಖವಾಡ ಕಳಚಿಬಿದ್ದಿದೆ” ಎಂದರು.

“ಆತಿಶಿ, ಮನೀಷ್ ಸಿಸೋಡಿಯ ಅವರೂ ಸೋಲುತ್ತಿದ್ದಾರೆ. ಲಿಕ್ಕರ್ ಗೇಟ್, ಶೀಷ್ ಮಹಲ್ ಹಗರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಪ್ ಬಣ್ಣ ಬಯಲಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಶೂನ್ಯ ಸಂಪಾದನೆ ಮಾಡಿತ್ತು. ಹರಿಯಾಣ, ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ಸಿಗೆ ಮುಖಭಂಗ ಆಗಿತ್ತು” ಎಂದು ಹೇಳಿದರು.

ಮುಂದಿನ ಚುನಾವಣೆಗೆ ದಿಕ್ಸೂಚಿ: ಅಶೋಕ್

“ದೆಹಲಿ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪ. ಇದು ದೇಶಕ್ಕೆ ಸಿಕ್ಕಿದ ಗೆಲುವು. ಡಿಕೆಶಿ ಗ್ಯಾರಂಟಿ ದೆಹಲಿಯಲ್ಲಿ ಠುಸ್ ಪಟಾಕಿ ಆಗಿದೆ. ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಟ್ಟು ಅಭಿವೃದ್ಧಿ ಇಲ್ಲವಾಗಿದೆ. ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಇದೇ ಕೇಜ್ರಿವಾಲ್ 25 ಉಚಿತಗಳನ್ನು ನೀಡಿದ್ದರು. ಅವರ ಸ್ಥಿತಿ ಏನಾಗಿದೆ? ದೆಹಲಿ ಫಲಿತಾಂಶ ದೇಶಕ್ಕೆ ದಿಕ್ಸೂಚಿ” ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಕೇಜ್ರಿವಾಲ್ ಸರಕಾರ ಭ್ರಷ್ಟಾಚಾರಕ್ಕೆ ಬಲಿ: ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಅರವಿಂದ್‌ ಕೇಜ್ರಿವಾಲ್ ಅವರ ದೆಹಲಿ ಸರಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ. ಬಿಜೆಪಿ ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಒಂದೇ ಒಂದು ಆಪಾದನೆಯನ್ನೂ ಹೊತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ವಿರುದ್ಧ ಶೇ 40 ಕಮಿಷನ್, ಪೇ ಸಿಎಂ ಮತ್ತಿತರ ಆರೋಪ ಮಾಡಿ ಚುನಾವಣಾ ತಂತ್ರ ಹೆಣೆದಿದ್ದ ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆ ಎಂದು ಟೀಕಿಸಿದರು. ಈಗ ಅವರು ಖಾತೆ ತೆರೆದಿಲ್ಲ; ಆದರೆ ಕ್ಯಾತೆ ತೆಗೆಯುವುದನ್ನು ಅವರು ಬಿಡುವುದಿಲ್ಲ” ಎಂದು ತಿಳಿಸಿದರು.

ಸುಳ್ಳಿನ ಮುಖವಾಡ ಕಳಚಿಬಿದ್ದಿದೆ: ಸಿ.ಟಿ.ರವಿ

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, “ಕೇಜ್ರಿವಾಲ್ ಪ್ರಾಮಾಣಿಕ ಅಲ್ಲ; ಭ್ರಷ್ಟ ಎಂಬುದು ಜನರಿಗೆ ಮನವರಿಕೆ ಆಗಿದೆ. ಸುಳ್ಳಿನ ಮುಖವಾಡ ಕಳಚಿಬಿದ್ದಿದೆ ಎಂದು ತಿಳಿಸಿದರು. ಕಾಂಗ್ರೆಸ್ ಅವಲೋಕನ ಮಾಡಿಕೊಳ್ಳಬೇಕಿದೆ. ಕೇವಲ ನಕಾರಾತ್ಮಕ ಪ್ರಚಾರದಿಂದ ಚುನಾವಣೆ ಗೆಲ್ಲಲು ಅಸಾಧ್ಯ. ಅಂಬೇಡ್ಕರರ ಸಂವಿಧಾನ, ಜನತೆಯ ಸಂವಿಧಾನ ಗೆದ್ದಿದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments