Homeದೇಶರಾಹುಲ್ & ಪ್ರಿಯಾಂಕ್ ಗಾಂಧಿ ಬಂಧನ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: ಬಿ ಕೆ...

ರಾಹುಲ್ & ಪ್ರಿಯಾಂಕ್ ಗಾಂಧಿ ಬಂಧನ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: ಬಿ ಕೆ ಹರಿಪ್ರಸಾದ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕ್ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧನಕ್ಕೊಳಪಡಿಸಿರುವುದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಕ್ಷೇತ್ರದ ಅವ್ಯವಸ್ಥೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಚ್ ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರಧಾನಮಂತ್ರಿಗಳ ಮನೆ ಮುಂದೆ ಮಂಗಳವಾರ ನಡೆಸಿದ ಪ್ರತಿಭಟನೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು.

ಪ್ರತಿಭಟನೆ ವೇಳೆ ಪಕ್ಷದ ನಾಯಕರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ ಹರಿಪ್ರಸಾದ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದ ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನೇ ಬಂಧಿಸುವುದು ಅಘೋಷಿತ ತುರ್ತು ಪರಿಸ್ಥಿತಿ ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಲಾಠಿ ಬೀಸಿ ಅವರ ಧ್ವನಿಯನ್ನು ಹತ್ತಿಕ್ಕಿದ ಕೇಂದ್ರ ಸರ್ಕಾರ, ಈಗ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ ಪ್ರತಿಪಕ್ಷದ ನಾಯಕರನ್ನೂ ಪೊಲೀಸ್ ಬಲದಿಂದ ಮೌನಗೊಳಿಸಲು ಹೊರಟಿದೆ. ಇದು ಪ್ರಜಾಪ್ರಭುತ್ವದ ಆಡಳಿತವಲ್ಲ; ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ ಎಂದು ಟೀಕಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಪೊಲೀಸ್ ಪಡೆಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಪ್ರಶ್ನೆಗಳಿಂದಲೂ, ರಾಹುಲ್ ಗಾಂಧಿ ಅವರ ಹೋರಾಟದಿಂದಲೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬಂಧನಗಳಿಂದ ಸತ್ಯವನ್ನು ಮುಚ್ಚಲು ಸಾಧ್ಯವಿಲ್ಲ; ಲಾಠಿಗಳಿಂದ ನ್ಯಾಯದ ಧ್ವನಿಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಬಂಧಿಸಿರುವ ಎಲ್ಲ ನಾಯಕರು ಮತ್ತು ವಿದ್ಯಾರ್ಥಿಗಳನ್ನು ತಕ್ಷಣ ಬೇಷರತ್ತಾಗಿ ಬಿಡುಗಡೆ ಮಾಡಿ. ಕೇಂದ್ರ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments