ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಟೀಕಿಸಿ ಪೋಸ್ಟ್ ಮಾಡಿರುವ ಅರುವ ಸಚಿವರು, “ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ”ಎಂದಿದ್ದಾರೆ.
“ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.