Homeಕರ್ನಾಟಕರಾಜ್ಯಸಭಾ ಚುನಾವಣೆ: ಅಡ್ಡಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್‌

ರಾಜ್ಯಸಭಾ ಚುನಾವಣೆ: ಅಡ್ಡಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್‌

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಇದನ್ನು ಖಚಿತಪಡಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ’ ಎಂದರು.

ಸೋಮಶೇಖ‌ರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಿರಲಿಲ್ಲ” ಎಂದು ದೂರಿದರು.

“ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಈ ಹಿಂದೆ ಸೋಮಶೇಖ‌ರ್ ಹೇಳಿದ್ದನ್ನು ಗಮನಿಸಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments