ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಸಹಿತ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ, ಮನ್ಸೂರ್ ಆಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಸರಾಜು ಸೋಮಯ್ಯ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ನಾರಾಯಣ ಸಾ ಬಾಂಡಗೆ ಅವರ ಅಧಿಕಾರ ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಿತ್ತು. ತೆರವಾದ ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ದ್ವೈವಾರ್ಷಿಕ ಚುನಾವಣೆಯನ್ನು ಘೋಷಣೆ ಮಾಡಿತ್ತು.


